ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೆಶನದ ಕೆಜಿಎಫ್-2 ಚಿತ್ರಿಕರಣ ಇಂದಿನಿಂದ ಬೆಂಗಳೂರಿನಲ್ಲಿ ಆರಂಭವಾಗಿದೆ. ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಕೆಲಸಗಳಿಗೆ ಇದೀಗ ಚಾಲನೆ ಸಿಕ್ಕಿದ್ದು, ಸಿನಿಮಾ ತಂಡಗಳು ಮತ್ತೆ ಕ್ಯಾಮರಾ ಆನ್ ಮಾಡಿವೆ.
ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಆಕ್ಟೋಬರ್ 23ರಂದು ಕೆಜಿಎಫ್-2 ಬಿಡುಗಡೆಯಾಗಲಿದೆ ಎಂದು ದಿನಾಂಕ ಘೋಷಿಸಿದ್ದು 90% ಚಿತ್ರಿಕರಣ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಶೂಟಿಂಗ್ ಗಾಗಿ ಬೆಂಗಳೂರಿನ ಮಿನರ್ವ ಮಿಲ್ನಲ್ಲಿಯೇ ಬೃಹತ್ ಸೆಟ್ ಹಾಕಲಾಗಿದ್ದು, ಇಡೀ ತಂಡ ಶೂಟಿಂಗ್ನಲ್ಲಿ ಪಾಲ್ಗೊಳ್ಳಲುತ್ತಿದೆ. ಒಟ್ಟು 20 ದಿನಗಳ ಕಾಲ ಚಿತ್ರಿಕರಣ ನಡೆಯಲಿದೆ ಎಂದು ತಿಳಿದುಬಂದಿದೆ.
‘ಅಧೀರ’ ಪಾತ್ರಧಾರಿ ಬಾಲಿವುಡ್ ನಟ ಸಂಜಯ್ ದತ್ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವುದರಿಂದ, ಅವರು ಗುಣಮುಖರಾಗಿ ಬಂದ ನಂತರವಷ್ಟೆ ಕೊನೆಯ ಹಂತದ ಚಿತ್ರಿಕರಣ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಅದಾಗ್ಯೂ ಸಂಗೀತದ ಕೆಲಸವೂ ಬಹುತೇಕ ಪೂರ್ಣಗೊಳ್ಳುತ್ತಿದೆ. ಯಶ್ ನಾಯಕತ್ವದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ವಿಜಯ್ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ. ಬಾಲಿವುಡ್ ನಟಿ ರವೀನಾ ಟಂಡನ್ ಕೂಡ ಬಣ್ಣ ಹಚ್ಚಿದ್ದು, ಶ್ರೀನಿಧಿ ಶೆಟ್ಟಿ ಯಶ್ ನಾಯಕಿಯಗಿ ನಟಿಸಿದ್ದಾರೆ.