Advertisement
ಇದೇ ವೇಳೆ ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿ ಕಿರಣ್ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ. ತಮಿಳ್ ಪ್ರಭು ವಿರುದ್ಧ ನಂದಿನಿ ಲೇಔಟ್ ಠಾಣೆ ಸೇರಿ ನಗರದ ಕೆಲ ಠಾಣೆಗಳಲ್ಲಿ ದರೋಡೆ, ಕೊಲೆ, ಹಲ್ಲೆ ಆರೋಪಗಳಿವೆ. ನ.6ರಂದು ಪೀಣ್ಯದ ಟಾರ್ಪಲ್ ಕಾರ್ಖಾನೆ ಮಾಲೀಕ ಸೋಮನಾಥ್ ಎಂಬವರ ಹತ್ಯೆಗೆ ಮುಂದಾಗಿದ್ದರು ಎಂದು ಪೊಲೀಸರು ಹೇಳಿದರು.
Related Articles
Advertisement
ಇನ್ಸ್‌ಪೆಕ್ಟರ್ ತಮ್ಮ ಸಿಬ್ಬಂದಿ ಜತೆ ಸ್ಥಳಕ್ಕೆ ತೆರಳಿದ್ದರು. ಆಗ ಬಂಧಿಸಲು ಹೋದ ಹೆಡ್ ಕಾನ್ಸ್‌ಟೇಬಲ್‌ಗಳಾದ ರಾಮಮೂರ್ತಿ ಮತ್ತು ರಂಗಸ್ವಾಮಿ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ. ತಕ್ಷಣ ಇನ್ಸ್‌ಪೆಕ್ಟರ್ ಮುದ್ದುರಾಜು ಒಂದು ಸುತ್ತು ಗಾಳಿಯಲ್ಲಿ ಗುಂಡುಹಾರಿಸಿ ಎಚ್ಚರಿಕೆ ನೀಡಿದ್ದರು. ಶರಣಾಗದೆ ದಾಳಿ ಮುಂದುವರಿಸಿದಾಗ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ವಿದ್ಯಾರ್ಥಿ ಹತ್ಯೆಗೈದ ಆರೋಪಿಗಳಿಗೆ ಗುಂಡೇಟು: ಕ್ರಿಕೆಟ್ ಆಡುವ ವಿಚಾರದಲ್ಲಿ ಬಿಬಿಎ ವಿದ್ಯಾರ್ಥಿ ಉಮಾಮಹೇಶ್ವರ್(20)ನನ್ನು ಹತ್ಯೆಗೈದಿದ್ದ ಇಬ್ಬರು ಆರೋಪಿಗಳಿಗೆ ನಂದಿನಿ ಲೇಔಟ್ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಎಚ್‌ಎಂಟಿ ಲೇಔಟ್‌ನ ನಾಗಸಂದ್ರ ನಿವಾಸಿ ರೋಹಿತ್ (19) ಮತ್ತು ಚಂದನ್ ಅಲಿಯಾಸ್ ಎಬಿಸಿಡಿ ಚಂದು (19) ಬಂಧಿತರು.
ಆರೋಪಿಗಳ ಹಲ್ಲೆಯಿಂದ ಪ್ರೊಬೆಷನರಿ ಪಿಎಸ್‌ಐ ನಿತ್ಯಾನಂದ ಮತ್ತು ಕಾನ್ಸ್‌ಟೇಬಲ್ ಬಸಣ್ಣ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳು ನ.20ರಂದು ರಾತ್ರಿ ಬಿಬಿಎ ವಿದ್ಯಾರ್ಥಿ ಉಮಾಮಹೇಶ್ವರ್ ಎಂಬಾತನನ್ನು ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ರೋಹಿತ್ ಮತ್ತು ಚಂದನ್ 16 ವರ್ಷ ಇದ್ದಾಗಲೇ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬಾಲಮಂದಿರಕ್ಕೆ ಸೇರಿದ್ದರು. ಅವರ ವಿರುದ್ಧ ನಂದಿನಿ ಲೇಔಟ್ ಮತ್ತು ರಾಜಗೋಪಾಲನಗರ ಠಾಣೆಯಲ್ಲಿ ಕಳ್ಳತನ ಪ್ರಕರಣಗಳಿವೆ.
ಉಮಾಮಹೇಶ್ವರ್ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಒಂದೇ ಏರಿಯಾದಲ್ಲಿ ಇದ್ದು, ಸಣ್ಣಪುಟ್ಟ ವಿಚಾರಗಳಿಗೆ ಮನಸ್ತಾಪ ಬೆಳೆದು ಜಗಳ ಮಾಡಿಕೊಂಡಿದ್ದರು. ಆರೋಪಿಗಳು ತಮ್ಮ ಪ್ರದೇಶದಲ್ಲಿ ಪ್ರಾಬಲ್ಯ ಹೊಂದಲು ರೌಡಿ ಚಟುವಟಿಕೆಯಲ್ಲಿ ತೊಡಗಿದ್ದರು. ಇತ್ತೀಚೆಗೆ ಕ್ರಿಕೆಟ್ ಆಡುವ ವೇಳೆ ಉಮಾಮಹೇಶ್ವರ್, ರೋಹಿತ್ ಮೇಲೆ ಹಲ್ಲೆ ನಡೆಸಿದ್ದ. ಇದೇ ವಿಚಾರಕ್ಕೆ ಕೋಪಗೊಂಡಿದ್ದ ಆರೋಪಿಗಳು ಉಮಾಮಹೇಶ್ವರ್‌ನನ್ನು ಹತ್ಯೆ ಮಾಡಿದ್ದರು ಎಂದು ಪೊಲೀಸರು ಹೇಳಿದರು.
ಆರೋಪಿಗಳು ಭಾನುವಾರ ಮುಂಜಾನೆ ರಾಜಗೋಪಾಲನಗರ ವ್ಯಾಪ್ತಿಯ ಜಿಕೆಡಬ್ಲೂé ಲೇಔಟ್‌ನಲ್ಲಿ ಅವಿತುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಳಿಕ ನಂದಿನಿ ಲೇಔಟ್ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಲು ಹೋದಾಗ ವೇಳೆ ಪಿಎಸ್‌ಐ ನಿತ್ಯಾನಂದ ಮತ್ತು ಕಾನ್ಸ್‌ಟೇಬಲ್ ಬಸಣ್ಣ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.