Advertisement
ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ ಕೃತ್ಯವನ್ನು ತಾನೇ ಎಸಗಿರುವ ಬಗ್ಗೆ ಕೆಲವು ಮಾಧ್ಯಮಗಳಿಗೆ ದೂರವಾಣಿ ಮುಖೇನ ತಿಳಿಸಿದ್ದಾನೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕಲಿ ಯೋಗೀಶನ ಸೋದರ ಮತ್ತು ಆತನ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Related Articles
ಸಾರೀಸ್ ವಸ್ತ್ರ ಮಳಿಗೆಯ ಸೇಲ್ಸ್‌ಮನ್ ಮಹಾಲಿಂಗ ನಾಯ್ಕ (40) ಅವರ ತೊಡೆಗೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಗಾಯಾಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement
ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಕಿನ್ನಿಗೋಳಿಯಲ್ಲಿ ಮರದ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸಿಪ್ರಿಯನ್ ಡಿ’ಸೋಜಾ ಅವರನ್ನು ಕಲಿ ಯೋಗೀಶನ ಸಹಚರರು ಹಣಕ್ಕಾಗಿ ಒತ್ತಾಯಿಸಿ ಬೆದರಿಕೆ ಹಾಕಿದ್ದರು.
ಈ ಹಿಂದೆ ಭೂಗತ ಪಾತಕಿಗಳಿಂದ ಬಿಲ್ಡರ್‌ಗಳಿಗೆ ಹಫ್ತಾ ವಸೂಲಿಗಾಗಿ ಬೆದರಿಕೆ ಕರೆಗಳು ಬರುತ್ತಿದ್ದವು. ಇದೀಗ ರಿಯಲ್ ಎಸ್ಟೇಟ್ ಉದ್ಯಮ ನೆಲಕಚ್ಚಿದ ಪರಿಣಾಮ ಬೇರೆ ಉದ್ಯಮಿಗಳನ್ನು ಗುರಿಯಾಗಿಸಿ ಬೆದರಿಕೆ ಕರೆ ಮಾಡುತ್ತಿದ್ದಾರೆ. ಆದರೆ ಉದ್ಯಮಿಗಳು ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಿಲ್ಲ. ಶೂಟೌಟ್ ನಡೆದ ಬಳಿಕವೂ ಉದ್ಯಮಿಗಳು ಯಾವುದೇ ಬೆದರಿಕೆ ಇರಲಿಲ್ಲ ಎನ್ನುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ