ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಮಾಹಿತಿಗಳ ಪ್ರಕಾರ ಕಥೋಹಲೆನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಆರಂಭಗೊಂಡಿದ್ದು ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧನನ್ನು ಸೇನೆ ಸೆದೆಬಡಿದಿದೆ.
ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಿಎಸ್‌ಎಫ್ ಯೋಧನಿಗೆ ಗಾಯ:
ಪ್ರತ್ಯೇಕ ಘಟನೆಯಲ್ಲಿ, ರಾಮ್‌ಗಢ್ ಸೆಕ್ಟರ್‌ನಲ್ಲಿನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿದ ಪರಿಣಾಮ ಓರ್ವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬಂಧಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Technology: ಪುಸ್ತಕಗಳ ಪ್ರಪಂಚದ ಮೇಲೆ ಮೊಬೈಲ್ ತಂತ್ರಜ್ಞಾನದ ಪ್ರಭಾವ