ಗಂಗಾವತಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 50 ಎಕರೆಯ ಭತ್ತದ ಹುಲ್ಲಿನ ಬವಣೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಡೆದಿದೆ.
ರೈತ ಹುಸೇನ್ ಸಾಬ್ ಎಂಬುವರ ಮನೆಯ ಮುಂದೆ ಹಾಕಲಾಗಿದ್ದ 50 ಎಕರೆಯ ಭತ್ತದ ಹುಲ್ಲಿನ ಬಣವೆಯ ಮೇಲೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದ್ದು, ಸುಮಾರು ಹತ್ತು ಲಕ್ಷ ನಷ್ಟ ಸಂಭವಿಸಿದೆ ಎಂದು ರೈತ ಹುಸೇನ್ ಸಾಬ್ ಉದಯವಾಣಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಚುನಾವಣಾ ರಣತಂತ್ರ; ಮೇ.15ರ ನಂತರ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೃಹತ್ ಸಭೆ?
Related Articles
ಭತ್ತದ ಹುಲ್ಲಿನ ಬಣವೆಗೆ ಬೆಂಕಿ ತಗುಲಿದ ಕೂಡಲೇ ಗ್ರಾಮಸ್ಥರು ಅಗ್ನಿಶಾಮಕ ದಳದ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದೆ.