Advertisement

ಹಾಸ್ಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್  : ಕಂಪ್ಯೂಟರ್ ಭಸ್ಮ

08:58 AM Oct 15, 2021 | Team Udayavani |

ಕೊಪ್ಪಳ: ನಗರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ  ಶಾರ್ಟ್ ಸರ್ಕ್ಯೂಟ್ ಆಗಿ ಕಂಪ್ಯೂಟರ್‌ ಸೇರಿ ವಿವಿಧ ಕೆಲವು ದಾಖಲೆ ಸುಟ್ಟಿದ್ದು ಇದರಿಂದ ವಸತಿ ನಿಲಯದ ವಿದ್ಯಾರ್ಥಿನಿಯರು ಭಯಭೀತರಾದ ಘಟನೆ ನಡೆದಿದೆ.

Advertisement

ಕೊಪ್ಪಳ ಪಾಂಡುರಂಗ ದೇವಸ್ಥಾನ ಬಳಿ ಇರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ಆಗಿದೆ. ಈ ವೇಳೆ ವಸತಿ ನಿಲಯದಲ್ಲಿದ್ದ ಕಂಪ್ಯೂಟರ್ ಸುಟ್ಟು ಭಸ್ಮವಾಗಿದೆ. ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಭಯಗೊಂಡು ಸ್ಥಳೀಯರು ಹಾಗೂ ಅಗ್ನಿಶಾಮಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಯಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದರು. ಬಳಿಕ ಪೊಲೀಸರು ಹಾಗೀ ಅಗ್ನಿಶಾಮಕ ತಂಡವು ಧೈರ್ಯ ಹೇಳಿದ ಬಳಿಕ ಅವರು ಸಾವರಿಸಿಕೊಂಡರು. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next