Advertisement

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ದನದ ಕೊಟ್ಟಿಗೆ: ಸಾವಿರಾರು ರೂ. ಒಣ ಹುಲ್ಲು ಭಸ್ಮ

08:01 PM Jan 17, 2022 | Suhan S |

ತೀರ್ಥಹಳ್ಳಿ: ಶಾರ್ಟ್ ಸರ್ಕ್ಯೂಟ್ ನಿಂದ ದನದ ಕೊಟ್ಟಿಗೆಯಲ್ಲಿಟ್ಟ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಯಂಬಕಪುರ ಗ್ರಾಮ‌ ಪಂಚಾಯತಿ ವ್ಯಾಪ್ತಿಯ ಅಕ್ಲಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಮನೆಯ ದನದ ಕೊಟ್ಟಿಗೆ ಸೋಮವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿ ಕೊಟ್ಟಿಗೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ದನಗಳಿಗೆ ಮೇವಿಗಾಗಿ ದಾಸ್ತಾನಿಟ್ಟ ಒಣಹುಲ್ಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೆಂಕಿ ನಂದಿಸಿ ಆಗಬಹುದಾಗಿದ್ದ ದೊಡ್ಡ ಅವಘಡವನ್ನು ತಪ್ಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ಆರಿಸಿದ್ದಾರೆಂದು ತಿಳಿದುಬಂದಿದೆ.

ಅದೃಷ್ಟವಶಾತ್ ದನಗಳು ಇನ್ನೂ ಕೊಟ್ಟಿಗೆಗೆ ಬಂದಿರಲಿಲ್ಲ ಎನ್ನಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next