ಪುಣೆ : ಮಹಾರಾಷ್ಟ್ರದ ಪುಣೆ ನಗರದಲ್ಲಿ ಇಂದು ರಾಜ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ 42 ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಯರವಾಡ ಪ್ರದೇಶದ ಶಾಸ್ತ್ರಿ ಚೌಕ್‌ನಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು. ಬಸ್ ಯವತ್ಮಾಲ್ ನಿಂದ ಪುಣೆಗೆ ಹೋಗುತ್ತಿತ್ತು. ಬಸ್ ಚಾಲಕ ಮತ್ತು ಕಂಡಕ್ಟರ್ ವಾಹನದಿಂದ ಹೊಗೆ ಬರುತ್ತಿರುವುದನ್ನು ಕಂಡ ಕೂಡಲೇ ಎಚ್ಚೆತ್ತು ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ.
ಅತ್ತ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದ ಕೂಡಲೇ ಬಸ್ ಹೊತ್ತಿ ಉರಿದಿದೆ. ಘಟನೆ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಸದ್ಯ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ, ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕನ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಇದನ್ನೂ ಓದಿ : ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಜೀವ ಬೆದರಿಕೆ: ನಟ ಸಲ್ಮಾನ್ ಖಾನ್ ಗೆ Y+ ಭದ್ರತೆ