Advertisement

ಹಿರೇಬೇವನೂರ ಗ್ರಾಮದಲ್ಲಿ ಶಾಟ್ ಸರ್ಕ್ಯೂಟ್ ಗೆ ಅಂಗಡಿಗಳು ಭಸ್ಮ

08:48 PM Mar 02, 2021 | Team Udayavani |

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಎರಡು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ

Advertisement

ಫೋಟೋಗ್ರಾಫರ್, ಟೈಲರಿಂಗ್, ಮೋಟಾರ್ ರಿವೈಂಡಿಂಗ್ ಅಂಗಡಿಗಳಿಗೆ ಬೆಂಕಿ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು‌ ಎರಡು ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಇತರೆ ಅಂಗಡಿಗಳಿಗೆ ಹಾನಿಯಾಗಿದ್ದು, ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 8 ಲಕ್ಷ ರೂ. ಹಾನಿಯಾಗಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿದ ಅಗ್ನಿಶಾಮಕ ದಳದ ಸಿಬ್ಬಂದಿ, ವಿಸ್ತಾರಗೊಂಡು, ಸಂಭವನೀಯ ಭಾರಿ ಅನಾಹುತ ತಪ್ಪಿಸಿದ್ದಾರೆ.

ಇದನ್ನೂ ಓದಿ :ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ​ಡಾ ರಾಜೀನಾಮೆ

Advertisement

Udayavani is now on Telegram. Click here to join our channel and stay updated with the latest news.

Next