Advertisement

High Court; 16 ಸಾವಿರಕ್ಕೂ ಅಧಿಕ ವೈದ್ಯ ಸಿಬಂದಿ ಕೊರತೆ: ವಿವರಣೆ ಕೇಳಿದ ಕೋರ್ಟ್‌

12:16 AM Mar 26, 2024 | Team Udayavani |

ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿ 16 ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬಂದಿ ಕೊರತೆ ಸಂಬಂಧ ಪ್ರತಿಕ್ರಿಯೆ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಈ ಬಗ್ಗೆ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಪ್ರಕರಣದಲ್ಲಿ ಹೈಕೋರ್ಟ್‌ಗೆ ನೆರವುಗಾರ (ಅಮೈಕಸ್‌ ಕ್ಯೂರಿ) ಆಗಿ ನಿಯೋಜಿಸಲ್ಪಟ್ಟಿರುವ ಹಿರಿಯ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿ, ರಾಜ್ಯದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿ 16,500 ವೈದ್ಯಕೀಯ ಸಿಬಂದಿ ಕೊರತೆ ಇದೆ.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದು, ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ದುರ್ಲಭವಾಗಿದೆ. ಈ ನಡುವೆ ರಾಜ್ಯ ಸರಕಾರ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆಗೆ ತಿದ್ದುಪಡಿ ತಂದು, ಕಡ್ಡಾಯ ಸೇವೆಗೆ ವಿನಾಯಿತಿ ನೀಡಿದೆ. ಇದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವೈದ್ಯರ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿ ಈ ಹಿಂದೆ ಕಾಯ್ದೆ ತಂದಾಗ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಸರಕಾರ ಅದನ್ನು ಸಮರ್ಥಿಸಿಕೊಂಡಿತ್ತು. ಸರಕಾರದ ಕ್ರಮವನ್ನು ಎತ್ತಿಹಿಡಿದ ನ್ಯಾ| ಕೃಷ್ಣ ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿವರವಾದ ತೀರ್ಪು ಕೊಟ್ಟಿತ್ತು. ಆದರೆ ಈಗ ಅದೇ ಕಾಯ್ದೆಗೆ ತಿದ್ದುಪಡಿ ತಂದು ಮಂಜೂರಾತಿ ಹುದ್ದೆಗಳಿಗೆ ಮಾತ್ರ ಗ್ರಾಮೀಣ ಕಡ್ಡಾಯ ಸೇವೆಗೆ ಅವಕಾಶ ನೀಡಲಾಗುವುದು ಎಂದು ಸರಕಾರ ತೀರ್ಮಾನಿಸಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next