ಉಡುಪಿ : ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಲ್ಸಂಕ ಜಂಕ್ಷನ್ ಬಳಿ ಸೋಮವಾರ ಸಂಜೆ ನಡೆದಿದೆ.
Advertisement
ಆ್ಯಂಬುಲೆನ್ಸ್‌ನಲ್ಲಿ ಯಾರೂ ರೋಗಿಗಳು ಇರಲಿಲ್ಲ. ಈ ವೇಳೆ ಚಾಲಕ ಆ್ಯಂಬುಲೆನ್ಸ್ ನಿಲ್ಲಿಸಿದ್ದು ಬೆಂಕಿ ಮತ್ತಷ್ಟು ಆವರಿಸಿದೆ. ಕೂಡಲೇ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಘಟನೆಯಿಂದಾಗಿ ಟ್ರಾಫಿಕ್ ದಟ್ಟಣೆ ಉಂಟಾಯಿತು.