Advertisement

ಸುಪಾರಿ ಕಿಲ್ಲರ್‌ ಕಾಲಿಗೆ ಗುಂಡೇಟು

06:09 AM Mar 01, 2019 | Team Udayavani |

ಬೆಂಗಳೂರು: ಕೊಲೆ, ಕೊಲೆ ಯತ್ನ, ರಾಬರಿ ಪ್ರಕರಣಗಳಲ್ಲಿ ಬಂಧಿಸಲು ತೆರಳಿದ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ಮೋಸ್ಟ್‌ ವಾಟೆಂಡ್‌ ಸುಪಾರಿ ಹಂತಕನ ಎರಡೂ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Advertisement

ಡಿ.ಜೆ.ಹಳ್ಳಿ ನಿವಾಸಿ ದಿನೇಶ್‌ (30) ಬಂಧಿತ ಆರೋಪಿ. ಘಟನೆಯಲ್ಲಿ ಬಾಣಸವಾಡಿ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಧರ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಗೆ ಸುಪಾರಿ ಪಡೆಯುವ ಜತೆಗೆ ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲೂ ತೊಡಗಿದ್ದ ದಿನೇಶ್‌, ಮಾರತ್‌ಹಳ್ಳಿ, ಕೊತ್ತನೂರು, ಬಾಣಸವಾಡಿ ಸೇರಿ ಪೂರ್ವ ವಲಯದಲ್ಲಿ ಸಕ್ರಿಯನಾಗಿದ್ದ.

ಆತನ ವಿರುದ್ಧ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಗೆ ಯತ್ನ, ರಾಬರಿ ಸೇರಿ ಸುಮಾರು 25 ಅಧಿಕ ಪ್ರಕರಣಗಳು ದಾಖಲಾಗಿವೆ. ನಗರದ ಕೆಲ ಠಾಣೆಗಳಲ್ಲಿ ನಾಲ್ಕು ಕೊಲೆ, 6 ಕೊಲೆಯತ್ನ, 12 ರಾಬರಿ ಪ್ರಕರಣಗಳು ದಾಖಲಾಗಿದ್ದು, 2018ರಲ್ಲಿ ಮಣಿ ಹಾಗೂ ಪಳನಿ ಎಂಬುವವರನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ.

ದಿನೇಶ್‌ ಬಂಧನದಿಂದ ಬೈಯಪ್ಪನಹಳ್ಳಿ ಮತ್ತು ಹಲಸೂರು ಠಾಣೆ ವ್ಯಾಪ್ತಿಗಳಲ್ಲಿ ನಡೆದಿದ್ದ ಕೊಲೆ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಈ ಹಿನ್ನೆಲೆಯಲ್ಲಿ ಬಾಣಸವಾಡಿ ಉಪ ವಿಭಾಗದ ಎಸಿಪಿ ಡಾ.ಎಚ್‌.ಎಂ.ಮಹದೇವಪ್ಪ ಹಾಗೂ ಬಾಣಸವಾಡಿ ಠಾಣೆ ಇನ್‌ಸ್ಪೆಕ್ಟರ್‌ ವಿರೂಪಾಕ್ಷ ಸ್ವಾಮಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಮೂರು ದಿನಗಳಿಂದ ಆರೋಪಿಯ ಚಲನವಲನಗಳ ಮೇಲೆ ನಿಗಾವಹಿಸಿದ್ದ ತಂಡಗಳು ಬುಧವಾರ ತಡರಾತ್ರಿ 12.20ರ ಸುಮಾರಿಗೆ ಹೆಣ್ಣೂರಿನ ಸಾರಾಯಿಪಾಳ್ಯದ ಗೆದ್ದಲಹಳ್ಳಿ ಬಳಿ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

Advertisement

ಕಾಲಿಗೆ ಗುಂಡು: ತಮಿಳುನಾಡು, ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಎರಡು ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ. ಬುಧವಾರ ತಡರಾತ್ರಿ 12.20ರ ಸುಮಾರಿಗೆ ಹೆಣ್ಣೂರಿನ ಸಾರಾಯಿಪಾಳ್ಯದಿಂದ ಗೆದ್ದಲಹಳ್ಳಿ ಕಡೆಯ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ.

ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಬಾಣಸವಾಡಿ ಪಿಎಸ್‌ಐ ಅಬ್ಟಾಸ್‌ ತಿಕೋಟಿ ಮತ್ತು ಸಿಬ್ಬಂದಿ ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಪೊಲೀಸರನ್ನು ಕಂಡ ದಿನೇಶ್‌, ಬೈಕ್‌ ಏರಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಬಾಣಸವಾಡಿ ಹೆಡ್‌ಕಾನ್‌ಸ್ಟೆಬಲ್‌ ಧರ್ಮ, ಆರೋಪಿಯನ್ನು ಹಿಡಿಯಲು ಓಡಿದ್ದು, ಆರೋಪಿ ಚಾಕುವಿನಿಂದ ಧರ್ಮ ಅವರ ಎಡಗೈ ಮತ್ತು ಮುಂಗೈಗೆ ಇರಿದಿದ್ದಾನೆ.

ಅಷ್ಟರಲ್ಲಿ ಸ್ಥಳಕ್ಕೆ ಧಾವಿಸಿದ ಎಸಿಪಿ ಡಾ.ಎಚ್‌.ಎಂ.ಮಹದೇವಪ್ಪ, ಆರೋಪಿಗೆ ಶರಣಾಗುವಂತೆ ಸೂಚಿಸಿ, ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ದಿನೇಶ್‌ ಮತ್ತೂಮ್ಮೆ ಹಲ್ಲೆಗೆ ಯತ್ನಿಸಿದಾಗ ಸಿಬ್ಬಂದಿ ಆತ್ಮರಕ್ಷಣೆಗಾಗಿ ದಿನೇಶ್‌ನ ಎರಡೂ ಕಾಲುಗಳಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next