Advertisement

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

08:34 AM Apr 14, 2024 | Team Udayavani |

ಮುಂಬಯಿ: ಅಪರಿಚಿತ ವ್ಯಕ್ತಿಗಳು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮನೆಯ ಮುಂದೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿರುವ ಘಟನೆ ಭಾನುವಾರ(ಏ.14 ರಂದು) ಮುಂಜಾನೆ ನಡೆದಿರುವುದು ವರದಿಯಾಗಿದೆ.

Advertisement

ಮುಂಜಾನೆ ಸುಮಾರು 4:51 ರ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮೂರು ಸುತ್ತ ಗುಂಡಿನ ದಾಳಿ ನಡೆಸಿ ಪರಾರಿ ಆಗಿದ್ದಾರೆ ವರದಿ ಆಗಿದೆ.

ಘಟನೆಯ ನಂತರ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಕ್ರೈಂ ಬ್ರಾಂಚ್ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ವರದಿ ಆಗಿದೆ.

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಹಲವು ಬಾರಿ ಜೀವ ಬೆದರಿಕೆಗಳು ಬಂದಿವೆ. ಇಮೇಲ್‌ ಮೂಲಕ ಹಾಗೂ ಕರೆಯ ಮೂಲಕ ಅವರನ್ನು ಕೊಲ್ಲುವುದಾಗಿ ಬೆದರಿಕೆಗಳು ಅನೇಕ ಬಾರಿ ಬಂದಿದೆ. ಇದನ್ನು ಜೈಲಿನಲ್ಲಿರುವ ಗ್ಯಾಂಗ್‌ ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಮಾಡಿಸಿರುವುದಾಗಿ ಗೊತ್ತಾಗಿದೆ.

Advertisement

2018 ರಲ್ಲಿ, ಲಾರೆನ್ಸ್ ಬಿಷ್ಣೋಯ್ ಅವರ ಆಪ್ತ ಸಂಪತ್ ನೆಹ್ರಾ ಸಲ್ಮಾನ್ ಖಾನ್ ಅವರ ಮೇಲೆ ದಾಳಿ ಮಾಡುವ ಯೋಜನೆಯನ್ನು ರೂಪಿಸಿದ್ದರು.ಆದರೆ, ದಾಳಿ ನಡೆಸುವ ಮುನ್ನವೇ ಹರಿಯಾಣ ಪೊಲೀಸರು ಸಂಪತ್ ನೆಹ್ರಾ ಅವರನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆತ ಸಲ್ಮಾನ್ ಖಾನ್ ಮೇಲೆ ದಾಳಿ ನಡೆಸಿದ ಸಂಪೂರ್ಣ ಯೋಜನೆಯನ್ನು ಬಹಿರಂಗಪಡಿಸಿದ್ದ.

Advertisement

Udayavani is now on Telegram. Click here to join our channel and stay updated with the latest news.

Next