Advertisement
ನಗರದ ಜಿಲ್ಲಾಡಳಿತ ಭವನದ ವೀಡಿಯೋ ಸಂವಾದ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಹಶೀಲ್ದಾರ್ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ತಹಶೀಲ್ದಾರ್, ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟವಾಗದಂತೆ ನಿಗಾ ವಹಿಸಿ, ಪ್ರಸಕ್ತ ಬಿತ್ತನೆ ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದರು.
Related Articles
Advertisement
ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಬೇಕು. ಈ ಕಾರ್ಯದಲ್ಲಿ ವಿಳಂಬ ಧೋರಣೆ ತೋರುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಯಾವುದೇ ಮುಲಾಜಿಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ತಕ್ಷಣವೇ ತ್ವರಿತವಾಗಿ ಕೈಗೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿನ ನಿವೇಶನ ಹಂಚಿಕೆ, ಫಲಾನಿನುಭವಿಗಳ ಆಯ್ಕೆ ಮಾಡುವುದರಲ್ಲಿ ಪಾರದರ್ಶಕತೆ ಅನುಸರಿಸುವುದರ ಮೂಲಕ ಅರ್ಹ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸಬೇಕೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ., ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ ಎಂ., ತಹಶೀಲ್ದಾರ್‌ರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.