Advertisement

ಬಿತ್ತನೆ ಬೀಜ-ರಸಗೊಬ್ಬರ ಕೊರತೆಯಾಗಬಾರದು

03:13 PM Jun 17, 2022 | Team Udayavani |

ಗದಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಡಳಿತ ಭವನದ ವೀಡಿಯೋ ಸಂವಾದ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಹಶೀಲ್ದಾರ್‌ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ತಹಶೀಲ್ದಾರ್‌, ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟವಾಗದಂತೆ ನಿಗಾ ವಹಿಸಿ, ಪ್ರಸಕ್ತ ಬಿತ್ತನೆ ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದರು.

ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರೇ ಮೊಬೈಲ್‌ ಆ್ಯಪ್‌ ಮೂಲಕ ತಮ್ಮ ಬೆಳೆ ಸಮೀಕ್ಷೆ ಮಾಡಬೇಕಾಗಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು. ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರೈತರ ಖಾತೆಗೆ ಹಣ ಜಮೆ ಆಗುವ ಬ್ಯಾಂಕುಗಳ ಕೆಲ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳೆ ಹಾಗೂ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗದೇ ಇರುವ ಹಾಗೂ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾದರೂ ಇದುವರೆಗೆ ಪ್ರಗತಿಯಾಗದೇ ಇರುವ ಮನೆಗಳ ವರದಿ ನೀಡಬೇಕು. ಅಲ್ಲದೇ, ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಭೂ ಪರಿವರ್ತನೆ, ನ್ಯಾಯಾಲಯ ಪ್ರಕರಣಗಳನ್ನು ಕಾಲ ಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದರು.

ಪಿಂಚಣಿ ಕುರಿತು ಸ್ವೀಕೃತವಾಗುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ಕಾರ್ಯವನ್ನು ತ್ವರಿತವಾಗಿ ಕೈಗೊಂಡು ವರದಿ ಸಲ್ಲಿಸುವಂತೆ ತಹಶೀಲ್ದಾರ್‌ರಿಗೆ ಸೂಚನೆ ನೀಡಿದರು.

Advertisement

ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಬೇಕು. ಈ ಕಾರ್ಯದಲ್ಲಿ ವಿಳಂಬ ಧೋರಣೆ ತೋರುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಯಾವುದೇ ಮುಲಾಜಿಲ್ಲದೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ತಕ್ಷಣವೇ ತ್ವರಿತವಾಗಿ ಕೈಗೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿನ ನಿವೇಶನ ಹಂಚಿಕೆ, ಫಲಾನಿನುಭವಿಗಳ ಆಯ್ಕೆ ಮಾಡುವುದರಲ್ಲಿ ಪಾರದರ್ಶಕತೆ ಅನುಸರಿಸುವುದರ ಮೂಲಕ ಅರ್ಹ ಫಲಾನುಭವಿಗಳ ಆಯ್ಕೆಗೆ ಕ್ರಮ ವಹಿಸಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಕೆ., ಭೂ ದಾಖಲೆಗಳ ಉಪನಿರ್ದೇಶಕ ರವಿಕುಮಾರ ಎಂ., ತಹಶೀಲ್ದಾರ್‌ರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next