Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ಸರ್ಕಾರಕ್ಕೆ ಹೆದರಿಕೊಂಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಟ್ವೀಟ್ ಮಾತ್ರ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಹೆದರಿಕೊಳ್ಳದೆ ಧ್ವನಿ ಎತ್ತಬೇಕು. ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಶಂಕರಾಚಾರ್ಯ ಎಲ್ಲರ ಬಗ್ಗೆಯೂ ಪಠ್ಯದಲ್ಲಿ ಅವಮಾನವಾಗಿದೆ. ಕೆಲವು ಸ್ವಾಮೀಜಿಗಳು ಟ್ವೀಟ್ ಮಾಡಿ ದೂರು ಕೊಡುವ ಕೆಲಸ ಮಾಡಿದ್ದಾರೆ. ಆದರೆ ಇನ್ನಷ್ಟು ಸ್ವಾಮೀಜಿಗಳು ಧ್ವನಿ ಎತ್ತಬೇಕು. ಸ್ವಾಮೀಜಿಗಳು ರಾಜಕಾರಣಕ್ಕೆ ಬೆಂಬಲ ಕೊಡುವುದು ಬೇಡ. ಸ್ವಾಮೀಜಿಗಳಿರುವುದು ಸಂಸ್ಕೃತಿ, ನ್ಯಾಯ ಉಳಿಸಲು. ಸರ್ಕಾರಕ್ಕೆ ಹೆದರಿಕೊಂಡು ಸುಮ್ಮನಿರಿವುದು ಬೇಡ. ಅವರೇ ಧ್ವನಿ ಎತ್ತದಿದ್ದರೆ ಯಾರು ಎತ್ತಬೇಕು ಎಂದು ಪ್ರಶ್ನಿಸಿದರು.
Related Articles
Advertisement
ಇದನ್ನೂ ಓದಿ:ರಬಕವಿ-ಬನಹಟ್ಟಿ: ಜಗದಾಳ ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಮೋದಿ ಬರುತ್ತಿರುವುದು ಜನಕ್ಕೆ ಅನುಕೂಲ ಮಾಡಿಕೊಡಲಲ್ಲ. ಅವರ ಪಕ್ಷದ ನಾಯಕರ ಅನುಕೂಲಕ್ಕೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ 40% ಸರ್ಕಾರ ಎಂದಿದ್ದಕ್ಕೆ ಉತ್ತರ ಕೊಡಲಿ. ನಮ್ಮ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಕೇಳಿದ ಪ್ರಶ್ನೆಗಳಿಗೆ ಮೋದಿ ಉತ್ತರ ಕೊಡಲಿ ಎಂದು ಸವಾಲೆಸೆದರು.
ಡಿಕೆಶಿ ಹಿಂದು ವಿರೋಧಿ ಎಂಬ ಬಿಜೆಪಿ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿದ ಅವರು, ನನ್ನ ಕ್ಷೇತ್ರದಲ್ಲಿ 300-400 ದೇವಸ್ಥಾನಗಳನ್ನ ಜೀರ್ಣೋದ್ಧಾರ ಮಾಡಿಸಿದ್ದೇನೆ. ಇದನ್ನು ಬೇಕಾದರೆ ಬಂದು ನೋಡಲಿ. ನಾನು ಹಿಂದೂ ಧರ್ಮೀಯ. ಎಲ್ಲ ಧರ್ಮಕ್ಕೂ ಗೌರವ ಕೊಡಬೇಕು. ಪಕ್ಷದಲ್ಲಿ ನಾವು ಯಾರಿಗೆ ಬೇಕಾದರೂ ಅಧಿಕಾರ ಕೊಡ್ತೇವೆ. ಇವರಿಗೆ ಏನಾಗಬೇಕು. ಅವರಿಗೆ ನಮ್ಮ ಯುವಕರ ಬಗ್ಗೆ ಭಯವಿದೆ. ಸಂಘಟನೆಗಳ ಬಗ್ಗೆ ಭಯವಿದೆ ಎಂದರು.