Advertisement
ಪಟ್ಟಣದ ಐತಿಹಾಸಿಕ ಶ್ರೀಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದಲೂ ಬ್ರಾಹ್ಮಣರ ವಿರುದ್ಧ ಹೇಳಿಕೆಗಳು ಕೇಳಿ ಬರುತ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಹೆಚ್ಚಾಗಿ ಕೇಳಿ ಬರುತ್ತಿದ್ದು, ಬ್ರಾಹ್ಮಣರು ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ ಎಂದು ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಬಂದಿದ್ದಾರೆ? ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗುವುದಾದರೆ ಆಗಲಿ. ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ಎಂಬ ವಿಚಾರ ಇಟ್ಟುಕೊಂಡು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ ಎಂದರು.