Advertisement
ಶಾಸಕರಾದ ರಮೇಶ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಅರವಿಂದ ಲಿಂಬಾವಳಿ ಮೊದಲಾದವರು ಯತ್ನಾಳ್ ನೇತೃತ್ವದಲ್ಲಿ ಮಂಗಳವಾರ ಸಭೆ ಸೇರಿ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಬುಧವಾರ ಬೆಳಗ್ಗೆ 11.30ಕ್ಕೆ ಬರುವಂತೆ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಕರೆ ಮಾಡಿ ಸೂಚಿಸಿದ್ದಾರೆ. ಯತ್ನಾಳ್ ಅವರೊಬ್ಬರೇ ವಿವರಣೆ ನೀಡಲಿದ್ದಾರೆ. ನಾವು ಪಕ್ಷದ ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇದೆಲ್ಲದರ ಮಧ್ಯೆ ರಾಜ್ಯವನ್ನು ಪ್ರತಿನಿಧಿಸುವ ಎನ್ಡಿಎ ಸಂಸದರ ನಿಯೋಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಭೆ ಸೇರಿ ವಿಜಯೇಂದ್ರ ಯತ್ನಾಳ್ ಬಣ ರಾಜಕಾರಣದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಬಗ್ಗೆ ಸುದೀರ್ಘ ಚರ್ಚೆ ನಡೆಸಿದೆ. ಈ ತಂಡ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆಗೂ ಮಾತುಕತೆ ನಡೆಸಿದೆ ಎಂದು ಹೇಳಲಾಗುತ್ತಿದ್ದು, ಯತ್ನಾಳ್ ವಿರುದ್ಧ ತತ್ಕ್ಷಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಈಗ ಕ್ಷೀಣಿಸಿದೆ.