Advertisement

ಅವಕಾಶ ಸಿಕ್ಕಾಗ ಕ್ರೀಡಾ ಪ್ರತಿಭೆ ಪ್ರದರ್ಶಿಸಿ

02:46 PM Dec 04, 2021 | Team Udayavani |

ರಾಯಚೂರು: ಪ್ರತಿಯೊಬ್ಬ ವ್ಯಕ್ತಿ ಕೂಡ ಒಂದು ಕ್ರೀಡೆಯಲ್ಲಿ ನಿಪುಣನಾಗಿರುತ್ತಾನೆ. ಅವಕಾಶ ಸಿಕ್ಕಾಗ ತಮ್ಮೊಳಗಿನ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ನ್ಯಾಯಾಧಿಧೀಶ ಮಲ್ಲಿಕಾರ್ಜುನ ಗೌಡ ತಿಳಿಸಿದರು.

Advertisement

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಸೋಲು ಗೆಲುವುವನ್ನು ಸಮನಾಗಿ ಸ್ವೀಕರಿಸಬೇಕು. ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಸ್ಪೂರ್ತಿಯನ್ನು ಪ್ರದರ್ಶಿಸಬೇಕು. ತಮಗಾಗಿಯೇ ಜಿಲ್ಲಾ ಕ್ರೀಡಾಕೂಟ ಏರ್ಪಡಿಸುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯದಲ್ಲಿ ಗುರುತಿಸಿಕೊಳ್ಳಬೇಕು ಎಂದರು.

ಕ್ರೀಡೆ ಕೇವಲ ಮನೋರಂಜನೆಗಷ್ಟೇ ಅಲ್ಲ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನುಷ್ಯ ಪ್ರತಿದಿನ 108 ಸೂರ್ಯ ನಮಸ್ಕಾರ ಮಾಡುವುದರಿಂದ ದೇಹದ ಎಲ್ಲ ಅಂಗಾಂಗಗಳು ಕಾರ್ಯಕ್ಷಮತೆಯಿಂದ ಕೂಡಿರುತ್ತವೆ. ಕ್ರೀಡೆಯಲ್ಲಿ ಭಾಗವಹಿಸಬೇಕು ಹಾಗೂ ಪುಟ್ಬಾಲ್‌ ಆಡುವುದಿಂದ ಯಾವುದೇ ವ್ಯಾಯಾಮ ಬೇಕಾಗಿಲ್ಲ. ಯೋಗ, ಧ್ಯಾನ ಮಾಡುವುದರಿಂದ ಮನಸ್ಸು ಹತೋಟಿಯಲ್ಲಿರುತ್ತದೆ ಎಂದರು.

ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ ಜಿಲ್ಲೆಯಲ್ಲಿ ಐದು ತಾಲೂಕುಗಳಿಂದ ಪೊಲೀಸ್‌ ತಂಡಗಳು ಭಾಗವಹಿಸಿದ್ದವು. ಬೆಳಗ್ಗೆ ರನ್ನಿಂಗ್‌, ವಾಲಿಬಾಲ್‌, ಬ್ಯಾಡ್ಮಿಂಟನ್‌ ಕ್ರೀಡೆಗಳು ನಡೆದವು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖೀಲ್, ಹೆಚ್ಚುವರಿ ಜಿಲ್ಲಾ ಅಧೀಕ್ಷಕ ಹರಿಬಾಬು ಸೇರಿ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next