Advertisement

ದೇಶಕ್ಕೆ ಪ್ರಣಬ್‌ ಕೊಡುಗೆ ಅಪಾರ

06:52 PM Sep 01, 2020 | Suhan S |

ಚಿತ್ರದುರ್ಗ: ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್‌ ಮುಖರ್ಜಿ ಅವರ ನಿಧನದಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ತೀವ್ರ ಸಂತಾಪ ವ್ಯಕ್ತಪಡಿಸಿದರು.

Advertisement

ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದಿದ್ದಾರೆ. ನಂತರ ಒಂದು ನಿಮಿಷ ಮೌನ ಆಚರಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಗಳು, ನಿಪ್ಪಾಣಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಮಾಜಿ ಶಾಸಕ ಎಚ್‌. ಎಸ್‌. ಶಿವಶಂಕರ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ ಮೊದಲಾದವರಿದ್ದರು.

ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಅಗಲಿಕೆಯಿಂದ ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ಕುಟುಂಬ ವರ್ಗಕ್ಕೆ ದೊರೆಯಲಿ. ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ, ಚಿತ್ರದುರ್ಗ.

Advertisement

Udayavani is now on Telegram. Click here to join our channel and stay updated with the latest news.

Next