ಮಂಗಳೂರು: ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ತನ್ನ ರಜತ ಮಹೋತ್ಸವವನ್ನು ವೈಭವದಿಂದ ಶನಿವಾರ(ಡಿ14)ಆಚರಿಸಲಾಯಿತು. ವಿಮಾನ ನಿಲ್ದಾಣ ರಸ್ತೆಯ ಕೆಂಜಾರಿನಲ್ಲಿರುವ ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ಹಳೆ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು.
ಮುಖ್ಯ ಅತಿಥಿ ರೋಶನಿ ನಿಲಯದ ನಿವೃತ್ತ ಡೀನ್, ಖ್ಯಾತ ಮಾನಸಿಕ ಆರೋಗ್ಯ ತಜ್ಞೆ ಡಾ.ರಮೀಳಾ ಶೇಖರ್ ಉಪಸ್ಥಿತರಿದ್ದು ಮಾತನಾಡಿದರು. ಫೀಲ್ಡ್ ವರ್ಕ್ ನ ಪ್ರಾಮುಖ್ಯತೆ ಮತ್ತು ಸಾಮಾಜಿಕ ಕಾರ್ಯ ತತ್ವಗಳಲ್ಲಿ ಬಲವಾದ ಅಡಿಪಾಯ, ಪರಿಣಾಮಕಾರಿ ಮತ್ತು ದಕ್ಷ ವೃತ್ತಿಪರರನ್ನು ಅಭಿವೃದ್ಧಿಪಡಿಸುವಲ್ಲಿನ ಅಗತ್ಯವನ್ನು ಒತ್ತಿಹೇಳಿದರು.
ಶ್ರೀ ದೇವಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸದಾನಂದ ಶೆಟ್ಟಿ ಮತ್ತು ಉಪಾಧ್ಯಕ್ಷ ನಿಧೀಶ್ ಎಸ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರತನ್ ರೈ, ಕಾರ್ಯದರ್ಶಿ ಬಾಲಕೃಷ್ಣ ಭಾತೆ ಸನ್ಮಾನಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸ್ಪರ್ಶ ನೀಡಿ, ಕಾಲೇಜಿನ ವಿದ್ಯಾರ್ಥಿಗಳು ರೋಮಾಂಚಕನಕಾರಿ ಸಾಂಪ್ರದಾಯಿಕ ನೃತ್ಯ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ, ಅಭಿತಾ ಎಸ್., ಪ್ರಾಧ್ಯಾಧ್ಯಾಪಕರು, ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.