Advertisement
ವಿವಿಧೆಡೆ ಆಚರಣೆಬೋಳಾರ ಶ್ರೀ ಮಾರಿಯಮ್ಮ ಮಹಿಷಾಮರ್ದಿನಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಕೊಡಿಯಾಲಬೈಲ್-ಕುದ್ರೋಳಿ ಶ್ರೀ ಭಗವತೀ ದೇವಸ್ಥಾನ ಸಹಿತ ನಗರದ ಪ್ರಸಿದ್ಧ ಪುಣ್ಯ ಕ್ಷೇತ್ರಗಳು, ಪ್ರಮುಖ ದೇವಿ ಕ್ಷೇತ್ರ ಗಳಲ್ಲಿ ಒಂಬತ್ತು ದಿನಗಳ ವಿಶೇಷ ಪೂಜೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ರವಿವಾರ ಚಾಲನೆ ದೊರೆತಿದೆ.
Related Articles
Advertisement
ಗಮನ ಸೆಳೆದ ಹುಲಿ ಕುಣಿತರವಿವಾರ ನವದುರ್ಗೆಯರು ಹಾಗೂ ಶಾರದಾ ಪ್ರತಿಷ್ಠೆಯ ವೇಳೆ ನಗರದ ಹುಲಿ ವೇಷದವರ ತಂಡದಿಂದ ನಡೆದ ಕುಣಿತ ಗಮನ ಸೆಳೆಯಿತು. ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ, 11ಕ್ಕೆ ಕಲಶ ಪ್ರತಿಷ್ಠೆ ನಡೆಯಿತು. 11.20ಕ್ಕೆ ನವದುರ್ಗೆಯರ ಹಾಗೂ ಶಾರದಾ ಪ್ರತಿಷ್ಠೆ 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ರಾತ್ರಿ 7ರಿಂದ ಭಜನೆ, ಬಳಿಕ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ ನೆರವೇರಿತು. ಇಂದಿನ ಕಾರ್ಯಕ್ರಮ
ಬೆಳಗ್ಗೆ 10ಕ್ಕೆ ದುರ್ಗಾ ಹೋಮ, 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, ರಾತ್ರಿ 7ರಿಂದ ಭಜನೆ , 9ರಿಂದ ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶ್ರೀ ಮಂಗಳಾದೇವಿಯಲ್ಲಿ ನವರಾತ್ರಿ ಉತ್ಸವ
ಪುರಾಣ ಪ್ರಸಿದ್ಧ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ರವಿವಾರ ಆರಂಭಗೊಂಡಿತು. ಅ. 9ರ ವರೆಗೆ ಕ್ಷೇತ್ರದಲ್ಲಿ ನವರಾತ್ರಿ ಸಂಭ್ರಮವಿರಲಿದೆ.
ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಸಂಜೆ 4ರಿಂದ ಭಜನೆ, ಕುಂಬಳೆ ನಾಟ್ಯವಿದ್ಯಾಲಯದವರಿಂದ ನೃತ್ಯ ಸಂಭ್ರಮ, ಬಳಿಕ ಕದ್ರಿ ನೃತ್ಯ ವಿದ್ಯಾಲಯದ ಕಲಾವಿದರಿಂದ ನೃತ್ಯ ವೈವಿಧ್ಯ ಜರಗಲಿದೆ. ಕುಳಾಯಿ ಶ್ರೀ ಕಾಳಿಕಾಂಬಾ ದೇವಸ್ಥಾನ
ಮಹಾನಗರ: ಕುಳಾಯಿ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ರವಿವಾರದಿಂದ ಆರಂಭವಾಗಿದೆ. ಬೆಳಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಆ ಬಳಿಕ ಕಲಶ ಪ್ರತಿಷ್ಠೆ, ನವಕಲಾ ಹೋಮ, ನವಕಲಷಾಭಿಷೇಕ, ಮಧ್ಯಾಹ್ನ ಮಹಾಪೂಜೆ ನೆರವೇರಿತು. ರವಿವಾರದಿಂದ ಅ. 6ರ ವರೆಗೆ ರಾತ್ರಿ 7ರಿಂದ ನಿತ್ಯಭಜನೆ ನೆರವೇರಲಿದೆ ಎಂದು ಪ್ರಕಟನೆ ತಿಳಿಸಿದೆ.