Advertisement

ಪೊಳಲಿಗೆ ಕೇಂದ್ರ ಸಚಿವ ರಾಜನಾಥ್‌,ಬಿಎಸ್‌ವೈ ಭೇಟಿ

12:30 AM Mar 10, 2019 | Team Udayavani |

ಪೊಳಲಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

Advertisement

ಮಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಗೃಹ ಸಚಿವರು ಬಳಿಕ ಸಂಜೆ 5.23ಕ್ಕೆ ಕ್ಷೇತ್ರಕ್ಕೆ ಆಗಮಿಸಿ 5.40ಕ್ಕೆ ನಿರ್ಗಮಿಸಿದರು. ಬಿಗಿ ಪೊಲೀಸ್‌ ಬಂದೋಬಸ್ತ್ ಒದಗಿಸಲಾಗಿತ್ತು. ಮಧ್ಯಾಹ್ನ 2 ಗಂಟೆಯ ಬಳಿಕ ಸಾರ್ವಜನಿಕರಿಗೆ ದೇವಾಲಯ ಪ್ರವೇಶವನ್ನು ನಿಷೇಧಿಸಲಾಗಿತ್ತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಯು.ರಾಜೇಶ್‌ ನಾಯ್ಕ… ಅವರು ಹೂ ಗುತ್ಛ ನೀಡಿ ಸ್ವಾಗತಿಸಿದರು. ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಶಾಸಕ ಉಮಾನಾಥ ಕೋಟ್ಯಾನ್‌, ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಡಾ| ಆಶಾಜ್ಯೊತಿ ರೈ, ಕ್ಷೇತ್ರದ ಆಡಳಿತ ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ರಾಜನಾಥ್‌ ಸಿಂಗ್‌ ಅವರಿಗೆ ಕ್ಷೇತ್ರದ ಸಂಪೂರ್ಣ ಚರಿತ್ರೆಯನ್ನು ಅನಂತ ಉಪಾಧ್ಯಾಯ ಅವರು ಸಂಸ್ಕೃತದಲ್ಲಿ ವಿವರಿಸಿದರು. ಕ್ಷೇತ್ರದ ವತಿಯಿಂದ ಅವರನ್ನು ಗೌರವಿಸಲಾಯಿತು. ದೇಗುಲದ ಕೆತ್ತನೆ ಕಾರ್ಯದ ಕುರಿತು ರಾಜನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದರು.


ಯಡಿಯೂರಪ್ಪ ಭೇಟಿ
ಮಾ. 10ರ ಧಾರ್ಮಿಕ ಸಭೆಯಲ್ಲಿ ಬಿಎಸ್‌ವೈ ಭಾಗವಹಿಸುವ ಬಗ್ಗೆ ನಿಗದಿಯಾಗಿತ್ತು. ಆದರೆ ಶನಿವಾರ ಮಂಗಳೂರಿನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿದ್ದ ಕಾರಣ ಮುನ್ನಾದಿನವೇ ಆಗಮಿಸಿ ದೇವರ ದರ್ಶನ ಪಡೆದು ಬಳಿಕ ಉಗ್ರಾಣ, ಅನ್ನಪ್ರಸಾದದ ವ್ಯವಸ್ಥೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಜತೆಗಿದ್ದರು. 

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಅವರು ಕ್ಷೇತ್ರದ ವ್ಯವಸ್ಥೆಗಳ ಕುರಿತು ಬಿಎಸ್‌ವೈ ಅವರಿಗೆ ವಿವರಿಸಿದರು. ಮೊಕ್ತೇಸರ ಡಾ| ಮಂಜಯ್ಯ ಶೆಟ್ಟಿ ಗೌರವಿಸಿದರು.

ಶಾಸಕ ಡಾ| ವೈ. ಭರತ್‌ ಶೆಟ್ಟಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಎನ್‌. ಯೋಗೀಶ್‌ ಭಟ್‌, ಪ್ರಮುಖರಾದ ಜಗದೀಶ್‌ ಅಧಿಕಾರಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವದಾಸ್‌ ಶೆಟ್ಟಿ, ಕ್ಷೇತ್ರದ ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್‌, ಪವಿತ್ರಪಾಣಿ ಪಿ. ಮಾಧವ ಭಟ್‌, ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next