Advertisement

ಸಿದ್ಧಗಂಗಾ ಶ್ರೀ, ಆದಿ ಶ್ರೀಗಳ “ಅನ್ನ-ಅಕ್ಷರ ದಾಸೋಹ’ಕೈಬಿಟ್ಟ ಚಕ್ರತೀರ್ಥ ಸಮಿತಿ

11:51 PM Jun 07, 2022 | Team Udayavani |

ಬೆಂಗಳೂರು: ಇಲ್ಲಿಯವರೆಗೂ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಾಹಿತಿಗಳ ಹೆಸರು ಮತ್ತು ಪಠ್ಯವನ್ನು ಕೈಬಿಡಲಾಗುತ್ತಿದೆ ಎಂಬ ವಿವಾದ ಇದೀಗ, ಮಠ-ಮಂದಿರಗಳತ್ತ ತಿರುಗಿದೆ.

Advertisement

ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿರುವ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಕೈಂಕರ್ಯಗಳನ್ನೇ ಬಿಡಲಾಗಿದೆ.

ಬಡ ವಿದ್ಯಾರ್ಥಿಗಳಿಗೆ ಅನ್ನ, ಅಕ್ಷರ ದಾಸೋಹ ನಡೆಸುತ್ತಿದ್ದರು. ಈ ಮೂಲಕ ಮಠವು ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಮೂಲ ಶಿಕ್ಷಣ ಮತ್ತು ವೃತ್ತಿ ಶಿಕ್ಷಣವನ್ನು ಕಾಲೇಜುಗಳಲ್ಲಿ ನೀಡುತ್ತಿದೆ ಎನ್ನುವ ಸಾಲುಗಳನ್ನು ಕೈಬಿಡಲಾಗಿದೆ. ಇಲ್ಲಿಯವರೆಗೂ ಕುವೆಂಪು ಅವರನ್ನು ಅವಹೇಳನ ಮಾಡಲಾಗಿದೆ ಎನ್ನುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಆದಿಚುಂಚನಗಿರಿ ಸ್ವಾಮೀಜಿಗಳು ಮಾಡುತ್ತಿದ್ದ “ಅನ್ನ, ಅಕ್ಷರ ದಾಸೋಹ’ ಎಂಬ ಸಾಲುಗಳನ್ನು ಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಅದೇ ರೀತಿ ಜಾತಿ, ಮತ, ಧರ್ಮವನ್ನು ಪರಿಗಣಿಸದೆ ಸರ್ವಧರ್ಮಗಳನ್ನು ಸಮಾನವಾಗಿ ಕಾಣುತ್ತಿದ್ದ ಸಿದ್ಧಗಂಗಾ ಮಠದ ಶ್ರೀಗಳ ಸಾಧನೆಯನ್ನು ಕೈಬಿಡುವ ಪ್ರಮೇಯವೇನಿತ್ತು ಎಂದು ಲಿಂಗಾಯತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿತ್ತು, ಏನಾಗಿದೆ?
ಪ್ರೊ| ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯು 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ “ನಮ್ಮ ಕರ್ನಾಟಕ’ ಪಾಠದಲ್ಲಿ “ಸಿದ್ಧಗಂಗಾ ಮಠವು ಶ್ರೀ ಶಿವಕುಮಾರ ಸ್ವಾಮಿಗಳ ನೇತೃತ್ವದಲ್ಲಿ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅಕ್ಷರ ಮತ್ತು ಅನ್ನ ದಾಸೋಹದ ಕಾರ್ಯ ನಡೆಸುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಜನಿಸಿದ ಶ್ರೀ ಬಾಲಗಂಗಾಧರ ಸ್ವಾಮೀಜಿಯವರ ನೇತೃತ್ವದಲ್ಲಿ ಬೆಳೆದ ಆದಿಚುಂಚನಗಿರಿ ಮಠದ ಶೈಕ್ಷಣಿಕ ಸೇವೆಯು ಅಪೂರ್ವವಾಗಿದ್ದು, ಮೂಲ ಶಿಕ್ಷಣ, ವೃತ್ತಿ ಶಿಕ್ಷಣದ ಕಾಲೇಜುಗಳನ್ನು ನಡೆಸುತ್ತಿದೆ. ಚಿತ್ರದುರ್ಗದ ಮುರುಘರಾಜೇಂದ್ರ ಮಠ ಮತ್ತು ಸಿರಿಗೆರೆ ತರಗಳುಬಾಳು ಮಠಗಳು ಶೈಕ್ಷಣಿಕ ಸೇವೆಯೂ ಗಮನಾರ್ಹ’ ಎಂಬ ಸಾಲುಗಳನ್ನು ಉಲ್ಲೇಖೀಸಿದ್ದವು.

ರೋಹಿತ್‌ ಚಕ್ರತೀರ್ಥ ಸಮಿತಿಯು ಇದನ್ನು “ಸಿದ್ಧಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠ, ಮರುಘರಾಜೇಂದ್ರ ಮಠ ಮತ್ತು ಸಿರಿಗೆರೆ ತರಳಬಾಳು ಮಠಗಳ ಶೈಕ್ಷಣಿಕ ಸೇವೆಯು ಗಮನಾರ್ಹ ಎಂಬ ಸಾಲುಗಳನ್ನಷ್ಟೇ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next