Advertisement

ಸರ್ಕಾರಿ ಗೌರವದೊಂದಿಗೆ ತೋಂಟದ ಶ್ರೀ ಅಂತ್ಯಕ್ರಿಯೆ

06:25 AM Oct 22, 2018 | Team Udayavani |

ಗದಗ: ಹೃದಯಾಘಾತದಿಂದ ಲಿಂಗೈಕ್ಯರಾದ ತೋಂಟದಾರ್ಯ ಮಠದ 19ನೇ ಪೀಠಾಧಿಪತಿಯಾಗಿದ್ದ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನದಂತೆ ಭಾನುವಾರ ಮಧ್ಯಾಹ್ನ ತೋಂಟದಾರ್ಯ ಮಠದ ಆವರಣದಲ್ಲಿ ನೆರವೇರಿತು.

Advertisement

ನೂರಾರು ಮಠಾಧೀಶರು, ಸಾವಿರಾರು ಭಕ್ತರು, ಗಣ್ಯರು ಇದಕ್ಕೆ ಸಾಕ್ಷಿಯಾದರು. ಶನಿವಾರ ಲಿಂಗೈಕ್ಯರಾಗಿದ್ದ ಸ್ವಾಮೀಜಿಯವರ ಪಾರ್ಥೀವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೂ ಭಕ್ತರ ದರ್ಶನಕ್ಕೆ ಇರಿಸಲಾಗಿತ್ತು. ಮಾಜಿ ಪ್ರಧಾನಿ ದೇವೇಗೌಡ,
ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಠದ ನೂತನ ಉತ್ತರಾಧಿಕಾರಿ ಡಾ.ಸಿದ್ಧರಾಮ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಚಿತ್ರದುರ್ಗದ ಮುರುಘಾ ಶರಣರು ಸೇರಿದಂತೆ ಗಣ್ಯರು, ಮಠಾಧೀಶರು ನುಡಿ ನಮನ ಸಲ್ಲಿಸಿದರು. ನಂತರ, ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಯಿತು. ಮಧ್ಯಾಹ್ನ 3:45 ಗಂಟೆ ವೇಳೆಗೆ ಮಠದ ಆವರಣದಲ್ಲೇ ಲಿಂಗಾಯತ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದಕ್ಕೂ ಮೊದಲು ಸರ್ಕಾರದ ಪರವಾಗಿ ಗೌರವ ಸಲ್ಲಿಸಲಾಯಿತು.

ನ.9ರಂದು ಪುಣ್ಯಸ್ಮರಣೆ: ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನ.9ರಂದು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ವಾಮೀಜಿಯವರ ಅಂತ್ಯಕ್ರಿಯೆ ನೆರವೇರಿದ ನಂತರ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿ ಡಾ.ಸಿದ್ಧರಾಮ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರ ಸಮ್ಮುಖದಲ್ಲಿ ನ.9ರಂದು ಪುಣ್ಯಸ್ಮರಣೆ ಕಾರ್ಯಕ್ರಮ ಕೈಗೊಳ್ಳುವುದನ್ನು ಘೋಷಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next