ಹೈದರಾಬಾದ್: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಅವರು ಬುಧವಾರದಿಂದ ಆರಂಭವಾಗಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಅಯ್ಯರ್ ಬದಲಿಗೆ ಆರ್ ಸಿಬಿ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಅಯ್ಯರ್ ಬೆನ್ನುನೋವಿಗೆ ಒಳಗಾಗಿದ್ದಾರೆ ಮತ್ತು ಕಿವೀಸ್ ವಿರುದ್ಧದ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
“ಟೀಂ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಬೆನ್ನುನೋವಿನ ಕಾರಣ ಮುಂಬರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಗೆ ಹೋಗುತ್ತಾರೆ. ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಶ್ರೇಯಸ್ ಅಯ್ಯರ್ ಬದಲಿಗೆ ರಜತ್ ಪಾಟಿದಾರ್ ಅವರನ್ನು ಹೆಸರಿಸಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಪಂಜಾಬ್ ಕಿಂಗ್ಸ್ ತಂಡ ಸೇರಿದ ಕನ್ನಡಿಗ ಸುನೀಲ್ ಜೋಷಿ
Related Articles
ಅಯ್ಯರ್ ಏಕದಿನ ಸರಣಿಯಿಂದ ಹೊರಗುಳಿಯುವುದರಿಂದ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಬೆಂಚ್ ಕಾಯ್ದಿದ್ದ ಸೂರ್ಯಕುಮಾರ್ ಯಾದವ್ ಗೆ ಅವಕಾಶ ಸಿಗಲಿದೆ. ಅಲ್ಲದೆ ಸರಣಿಯಿಂದ ಹೊರಗುಳಿದಿರುವ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಪಡೆಯಬಹುದು.