Advertisement

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

01:04 PM Jan 05, 2025 | Team Udayavani |

ನಿರ್ಮಾಪಕ ಕೆ.ಮಂಜು ತಮ್ಮ ಪುತ್ರ ಶ್ರೇಯಸ್‌ರನ್ನು ನಾಯಕನನ್ನಾಗಿಸಿ “ವಿಷ್ಣು ಪ್ರಿಯಾ’ ಎಂಬ ಚಿತ್ರವನ್ನೂ ನಿರ್ಮಿಸಿದ್ದಾರೆ. ಬಹಳ ಹಿಂದೆಯೇ ನಿರ್ಮಾಣವಾಗಿದ್ದ ಈ ಚಿತ್ರವೀಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಫೆಬ್ರವರಿ 21ಕ್ಕೆ ತೆರೆ ಕಾಣಲಿದೆ. ನಾಯಕನ ಹೆಸರು ವಿಷ್ಣು, ನಾಯಕಿಯ ಹೆಸರು ಪ್ರಿಯಾ. ಅವರಿಬ್ಬರ ಹೆಸರೇ ಚಿತ್ರದ ಶೀರ್ಷಿಕೆಯಾಗಿದೆ.

Advertisement

90ರ ದಶಕದ ಪ್ರೇಮಕಥೆಯೊಂದನ್ನು ಹೇಳುವ ಈ ಚಿತ್ರಕ್ಕೆ ಮಲಯಾಳಂನ ವಿ.ಕೆ.ಪ್ರಕಾಶ್‌ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಮಲಯಾಳಂ, ತೆಲುಗು, ತಮಿಳಿನಲ್ಲಿ ನಲವತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿರುವ ‌ರು ರಾಷ್ಟ್ರಪ್ರಶಸ್ತಿಗೂ ಭಾಜನರಾಗಿದ್ದಾರೆ.

ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್‌ ಈ ಚಿತ್ರದ ಮೂಲಕ ನಾಯಕಿಯಾಗಿ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತೆಲುಗಿನ ಸಂಗೀತ ನಿರ್ದೇಶಕ ಗೋಪಿಸುಂದರ್‌ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಧಾರವಾಡ ಮೂಲದ ಸಿಂಧುಶ್ರೀ ಈ ಚಿತ್ರದ ಮೂಲ ಕಥೆಗಾರರು. ಆ ಕಥೆಯ ಒಂದು ಲೈನ್‌ ತಗೊಂಡು ಈ ಚಿತ್ರದ ಸ್ಕ್ರಿಪ್ಟ್ ಮಾಡಲಾಗಿದೆ. ಜೀವನದಲ್ಲಿ ಪ್ರೀತಿ ಅನ್ನೋದು ಎಷ್ಟು ಮುಖ್ಯ ಅಂತ ಈ ಚಿತ್ರದಲ್ಲಿ ತೋರಿಸಲಾಗಿದೆ. ಪ್ರೀತಿಗಾಗಿ ಏನು ಬೇಕಾದರೂ ಮಾಡಲು ರೆಡಿಯಾಗುವ ಯುವಕನ ಜೀವನದಲ್ಲಿ ಏನೇನೆಲ್ಲ ಆಗಿಹೋಗುತ್ತದೆ ಎಂದು ಈ ಚಿತ್ರ ಹೇಳುತ್ತದೆ. ನಾಯಕನ ತಂದೆಯಾಗಿ ಅಚ್ಯುತ್‌ ಕುಮಾರ್‌ ಹಾಗೂ ನಾಯಕಿಯ ತಂದೆಯಾಗಿ ಸುಚೇಂದ್ರ ಪ್ರಸಾದ್‌ ಅವರು ಅಭಿನಯಿಸಿದ್ದಾರೆ. ವಿನೋದ್‌ ಭಾರತಿ ಅವರ ಛಾಯಾಗ್ರಹಣ, ಸುರೇಶ್‌ ಅರಸ್‌ ಅವರ ಸಂಕಲನ ಈ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next