Advertisement

Heart Attack: ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ; ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದ ನಟ!

08:11 AM Dec 15, 2023 | Team Udayavani |

ಮುಂಬೈ: ಸಿನಿಮಾ ಶೂಟಿಂಗ್ ಮಾಡುತ್ತಿದ್ದ ವೇಳೆ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ವರದಿಯಾಗಿದೆ.

Advertisement

47 ವರ್ಷದ ಶ್ರೇಯಸ್ ತಲ್ಪಾಡೆ ಅವರು ಅಕ್ಷಯ್ ಕುಮಾರ್ ಅವರೊಂದಿಗೆ “ವೆಲ್ ಕಮ್ ಟು ದಿ ಜಂಗಲ್’ ಸಿನಿಮಾದ ಚಿತ್ರೀಕರಣದಲ್ಲಿದ್ದರು. ಈ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು ಎಂದು ವರದಿ ತಿಳಿಸಿದೆ. ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಇದನ್ನೂ ಓದಿ:Daily Horoscope: ಉದ್ಯೋಗದಲ್ಲಿ ವಿಶೇಷ ಅವಕಾಶಗಳು ಮತ್ತು ಜವಾಬ್ದಾರಿಗಳು

ವರದಿಗಳ ಪ್ರಕಾರ, ಚಿತ್ರೀಕರಣದ ಸಮಯದಲ್ಲಿ ತಲ್ಪಾಡೆ ಅವರು ಸಂಪೂರ್ಣವಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದರು. ದಿನದ ಅಂತ್ಯದ ವೇಳೆಗೆ ನೋವನುಭವಿಸಿದರು. ಸದ್ಯ ಆರೋಗ್ಯವಾಗಿದ್ದಾರೆ.

ಶ್ರೇಯಸ್ ತಲ್ಪಾಡೆ ಅವರು ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಶ್ರೇಯಸ್ 45ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next