Advertisement

 ಶ್ರೀ ಗುರುದೇವಾನಂದ ಸೇವಾ ಬಳಗ ಮುಂಬಯಿ 18ನೇ ವಾರ್ಷಿಕೋತ್ಸವ

03:58 PM Aug 08, 2017 | |

ಮುಂಬಯಿ: ಒಡಿಯೂರು  ಶ್ರೀ ಗುರುದೇವಾನಂದ ಸೇವಾ ಬಳಗ ಮುಂಬಯಿ ಘಟಕ ಶ್ರೀ ಗುರುದೇವ ಸಂಸ್ಥಾನಂ ಶ್ರೀ ಕ್ಷೇತ್ರ ಒಡಿಯೂರು ಇದರ 18ನೇ ವಾರ್ಷಿಕೋತ್ಸವ ಸಂಭ್ರಮವು ಆ. 6ರಂದು ಅಪರಾಹ್ನ 3ರಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ  ಮಾತಾನಂದಮಯಿ ಅವರ ಉಪಸ್ಥಿತಿ ಯಲ್ಲಿ ವಾರ್ಷಿಕೋತ್ಸವ  ಸಮಾರಂಭವು ನೆರವೇರಿತು. ಶ್ರೀಗಳು ಹಾಗೂ ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ಸಂಸದ ಡಾ| ಶ್ರೀಕಾಂತ್‌ ಶಿಂಧೆ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ಕಾರ್ಯಾಧ್ಯಕ್ಷ ಕೆ. ಡಿ. ಶೆಟ್ಟಿ, ಉದ್ಯಮಿ ಜಯಂತ್‌ ಶೆಟ್ಟಿ, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಪರಾಹ್ನ 3ರಿಂದ ಕಲ್ಲಡ್ಕ ವಿಟuಲ ನಾಯಕ್‌ ಮತ್ತು ಬಳಗದವರಿಂದ ಗೀತ ಸಾಹಿತ್ಯ ಸಂಭ್ರಮವನ್ನು ತುಳುವಿನಲ್ಲಿ ವಿಶಿಷ್ಟ ರೀತಿಯ ಸಂಯೋ ಜನೆಯಲ್ಲಿ ಆಯೋಜಿಸಲಾಗಿತ್ತು. ಸಂಜೆ ಗುರುವಂದನಾ ಕಾರ್ಯಕ್ರಮ, ಶ್ರೀ ಗುರುಪಾದಪೂಜೆ ನಡೆಯಿತು.

ಇದೇ ಸಂದರ್ಭದಲ್ಲಿ 2016-17ನೇ ಶೈಕ್ಷಣಿಕ ಸಾಲಿನ ವಿವಿಧ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಅಲ್ಲದೆ ಶ್ರೀ ಗುರುದೇವ ಸೇವಾ ಬಳಗದ ಯುವ ವಿಭಾಗಕ್ಕೆ ಚಾಲನೆ ನೀಡಲಾಯಿತು.  ರಾತ್ರಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು. ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ  ಸಮಿತಿಯ ಸದಸ್ಯರು, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಘಟಕದ ಅಧ್ಯಕ್ಷೆ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆಯರ ನೇತೃತ್ವದಲ್ಲಿ ಸಮಾರಂಭವು ಜರಗಿತು. 

Advertisement
Advertisement

Udayavani is now on Telegram. Click here to join our channel and stay updated with the latest news.

Next