ನವಿಮುಂಬಯಿ: ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಾಲಯದ ಸಮೀಪದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಮೂಕಾಂಬಿಕಾ ಸಭಾ ಭವನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತದಿಂದ ಅತಿಥಿ-ಗಣ್ಯರ ಹಾಗೂ ಭಕ್ತರ ಉಪಸ್ಥಿತಿಯಲ್ಲಿ ಮಾ. 10 ರಂದು ಬೆಳಗ್ಗೆ ಜರಗಿತು.
ದೇವಾಲಯದ ತಂತ್ರಿಗಳಾದ ವಿದ್ವಾನ್ ರಾಮಚಂದ್ರ ಬಾಯಾರ್ ಮತ್ತು ಪ್ರಧಾನ ಅರ್ಚಕ ಗುರುಪ್ರಸಾದ್ ವಿ. ಭಟ್ ಇವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8ರಿಂದ ವಿವಿಧ ಪೂಜೆಗಳು ನೆರವೇರಿದವು. ಆನಂತರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನತೀರ್ಥ ಸ್ವಾಮೀಜಿಯವರು ನೂತನ ಕಟ್ಟಡಕ್ಕೆ ಶಿಲಾನ್ಯಾಸಗೈದು ಶುಭಹಾರೈಸಿದರು.
ಆನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶ್ರೀಗಳು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಅಧ್ಯಕ್ಷ, ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನವಿಮುಂಬಯಿ ಮಹಾನಗರ ಪಾಲಿಕೆಯ ಮೇಯರ್ ಜಯಂತ್ ಸುತಾರ್, ದೇವಾಲಯದ ಕಟ್ಟಡ ಸಮಿತಿಯ ಕಾರ್ಯಾಧ್ಯಕ್ಷ ಅಣ್ಣಾವರ ಶಂಕರ ಶೆಟ್ಟಿ, ನವಿಮುಂಬಯಿ ಮಹಾನಗರ ಪಾಲಿಕೆಯ ಉಪಮೇಯರ್ ಮಂ ದಾಕಿನಿ ಮ್ಹಾತ್ರೆ, ನವಿಮುಂಬಯಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ವಿಜಯ ಚೌಗುಲೆ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಡಿ. ಶೆಟ್ಟಿ, ಸಿಡ್ಕೊàದ ಮಾಜಿ ಕಾರ್ಯಾಧ್ಯಕ್ಷ ಪ್ರಮೋದ್ ಇಂದು ರಾವ್, ನಗರ ಸೇವಕಿ ಉಷಾತಾಯಿ ಕೃಷ್ಣ ಪಾಟೀಲ್, ನಗರ ಸೇವಕ ಪ್ರಶಾಂತ್ ಪಾಟೀಲ್, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳದ ಅಧ್ಯಕ್ಷ ನಂದಿಕೂರು ಜಗದೀಶ್ ಶೆಟ್ಟಿ ಇವರು ಉಪಸ್ಥಿತರಿದ್ದರು.
ಶ್ರೀ ಮೂಕಾಂಬಿಕಾ ಕ್ಷೇತ್ರದ ಉಪಾಧ್ಯಕ್ಷರುಗಳಾದ ನಂದಿಕೂರು ಜಗದೀಶ್ ಶೆಟ್ಟಿ, ಕೆ. ಎಂ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ತಾಳಿಪಾಡಿಗುತ್ತು ಭಾಸ್ಕರ್ ಎಂ. ಶೆಟ್ಟಿ, ಕೋಶಾಧಿಕಾರಿ ಶೇಖರ್ ವಿ. ದೇವಾಡಿಗ, ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಸಮಿತಿಯ ಸದಸ್ಯರುಗಳಾದ ರಾಘು ಆರ್. ಕೋಟ್ಯಾನ್, ಕುಟ್ಟಿ ಎ. ಕುಂದರ್, ಶಂಕರ್ ಜಿ. ಮೊಲಿ, ಸುಧಾಕರ ಸಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ್ ಶೆಟ್ಟಿ ಕುರ್ಕಾಲ್, ಹರೀಶ್ ಶೆಟ್ಟಿ ಪಡುಬಿದ್ರೆ, ಹರೀಶ್ ಶೆಟ್ಟಿ ನಲ್ಲೂರು, ಶಕುಂತಳಾ ಎಸ್. ಶೆಟ್ಟಿ ಹಾಗೂ ದೇವಾಲಯದ ಸಹ ಸಂಸ್ಥೆಗಳಾದ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಯ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಆನಂತರ ವಿವಿಧ ಸಂಘ-ಸಂಸ್ಥೆಗಳ ಸದಸ್ಯರಿಂದ ನೃತ್ಯ ವೈವಿಧ್ಯ, ಅಪರಾಹ್ನ 3.30ರಿಂದ ಧಾರ್ಮಿಕ ಸಭೆ, ಸಂಜೆ 5 ರಿಂದ ರಂಗಭೂಮಿ ಬಿ. ಸಿ. ರೋಡ್ ಇದರ ಪ್ರಬುದ್ಧ ಕಲಾವಿದರಿಂದ ರಂಗಕಲಾವಿದ, ಚಿತ್ರನಟ ಸುಂದರ್ ರೈ ಮಂದಾರ ಇವರ ಸಾರಥ್ಯದಲ್ಲಿ ಸೇಲೆ ಸುಂದರೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.
ಚಿತ್ರ-ವರದಿ : ಸುಭಾಶ್ ಶಿರಿಯಾ