Advertisement

ವಿದ್ಯಾರ್ಥಿಗಳು ಜೀವನದಲ್ಲಿ ಆಶಾಭಾವನೆ ಬೆಳೆಸಿಕೊಳ್ಳಿ: ಸೋಸಲೆ ಶ್ರೀ

02:17 PM Mar 25, 2023 | Team Udayavani |

ಶಿರ್ವ: ವಿದ್ಯಾರ್ಥಿಗಳು ಯಾವುದೇ ಕಷ್ಟದ ಸಂದರ್ಭದಲ್ಲಿ ಭರವಸೆಯನ್ನು ಕಳೆದುಕೊಳ್ಳದೆ ಸಮಸ್ಯೆಯನ್ನು ಎದುರಿಸುವ ಆಶಾಭಾವನೆ ಬೆಳೆಸಿಕೊಳ್ಳಬೇಕು. ಸದಿಚ್ಛೆ ಮತ್ತು ಆಶಾಭಾವನೆ ಬೆಳೆಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದು ಶ್ರೀ ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

Advertisement

ಅವರು ಮಾ. 24ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿ ಉಪ ಲೋಕಾಯುಕ್ತ ಕೆ.ಎನ್‌. ಫಣೀಂದ್ರ ಮಾತನಾಡಿ ಯುವಜನತೆ ಮನಸ್ಸು ಮಾಡಿ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣದ ಪಣ ತೊಟ್ಟು ಸಮಾಜಕ್ಕೆ ಒಳಿತು ಮಾಡಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಉಡುಪಿ ಶ್ರೀಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮಾತನಾಡಿ ಶಿಸ್ತು, ಗುರಿ ಮತ್ತು ಸಾಧನೆಯ ಸೇತುವೆಯಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮೈಗೂಡಿಸಿ ಕೊಂಡಲ್ಲಿ ಸಾಧನೆಯ ಮೆಟ್ಟಿಲನ್ನು ಏರಬಹುದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್

Advertisement

ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಹಾಗೂ ಗೌತಮ ಫೌಂಡೇಶನ್‌ ವಿದ್ಯಾರ್ಥಿವೇತನವನ್ನು ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಮತ್ತು ಕೆ.ಎನ್‌ ಫಣೀಂದ್ರ ವಿತರಿಸಿದರು. ಉತ್ತಮ ಶೈಕ್ಷಣಿಕ ಸಾಧನೆಗಾಗಿ ಗಣಕಯಂತ್ರ ವಿಭಾಗದ ರಂಜನಿ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ಶೇಷಗಿರಿ ವೈಕುಂಠ ಪೈ ಅವರಿಗೆ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀ ಮಧ್ವ ವಾದಿರಾಜ ಪ್ರಶಸ್ತಿ ನೀಡಿ ಗೌರವಿಸಿದರು. ದ್ವಿತೀಯ ಮತ್ತು ತೃತೀಯ ವರ್ಷದ ಉತ್ತಮ ವಿದ್ಯಾರ್ಥಿಗಳಿಗೆ ಹಯವದನ ಪ್ರಶಸ್ತಿ ನೀಡಲಾಯಿತು. ಡಾಕ್ಟರೇಟ್‌ ಪದವಿ ಪಡೆದುಕೊಂಡ ಸಂಸ್ಥೆಯ ಪ್ರಾಧ್ಯಾಪಕರನ್ನು ಗೌರವಿಸಲಾಯಿತು. ಸಂಸ್ಥೆಯ ಡೀನ್‌ ಡಾ| ಸುದರ್ಶನ್‌ ರಾವ್‌ ವಿದ್ಯಾರ್ಥಿವೇತನ ಪಡೆದವರ ವಿವರ ಮತ್ತು ಡಾ| ರವಿಪ್ರಭಾ ಕೆ. ಶೈಕ್ಷಣಿಕ ಸಾಧಕರು ಹಾಗೂ ಅನಂತ ಮೋಹನ ಮಲ್ಯ ಡಾಕ್ಟರೇಟ್‌ ಪದವಿ ಪಡೆದವರ ಪಟ್ಟಿ ವಾಚಿಸಿದರು.

ಮೆಕ್ಯಾನಿಕಲ್‌ ವಿಭಾಗದ ಡಾ| ಮಂಜುನಾಥ ಎಸ್‌.ಮತ್ತು ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಸಂಧ್ಯಾ ಪರಿಚಯಿಸಿದರು. ಸಂಸ್ಥೆಯ ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ ವಾರ್ಷಿಕ ವರದಿ ಮಂಡಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಪಾಡಿಗಾರು ಶ್ರೀನಿವಾಸ ತಂತ್ರಿ, ಉಪ ಪ್ರಾಂಶುಪಾಲ ಡಾ| ಗಣೇಶ್‌ ಐತಾಳ್‌, ಆಡಳಿತ ಮಂಡಳಿಯ ಸದಸ್ಯರಾದ ಜಗದೀಶ ಆಚಾರ್ಯ,ಸುಂದರ ಮಡಕ್ಷೀರ,ಶ್ಯಾಮಸುಂದರ್‌ ಮತ್ತು ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೇಯಾ ನಾಯಕ್‌ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಲೋಕಾಯುಕ್ತದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು,ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಪನ್ಯಾಸಕ ವೃಂದ, ಹೆತ್ತವರು,ಹಳೆವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್‌ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಂಕಿತಾ ಭಟ್‌ ಮತ್ತು ನಿಧಿ ಪಾಟ್ಕರ್‌ ಕಾರ್ಯಕ್ರಮ ನಿರೂಪಿಸಿ, ಪ್ರಾಧ್ಯಾಪಕ ಸಚಿನ್‌ ಪ್ರಭು ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next