Advertisement

Sangolli Rayanna ವೃತ್ತ ನಿರ್ಮಾಣಕ್ಕೆ ಶ್ರೀ ಮಹಾಂತಯ್ಯ ಸ್ವಾಮೀಜಿ ಆಗ್ರಹ

12:37 AM Aug 28, 2023 | Team Udayavani |

ಉಡುಪಿ: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ   ಸಂಗೊಳ್ಳಿ ರಾಯಣ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. 228ನೇ ಜಯಂತಿಯೊಳಗೆ ನಗರದಲ್ಲಿ ಯಾವುದಾದರೊಂದು ಕಡೆಯಲ್ಲಿ ರಾಯಣ್ಣನ ಪ್ರತಿಮೆ ಸಹಿತ ವೃತ್ತ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಬೈಲಹೊಂಗಲದ ದುರ್ಗಾದೇವಿ ದೇವಸ್ಥಾನದ ಧರ್ಮದರ್ಶಿ ಶ್ರೀ ಮಹಾಂತಯ್ಯ ಸ್ವಾಮೀಜಿ ಹೇಳಿದರು.

Advertisement

ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಉಡುಪಿ, ದ.ಕ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವåಾನಿ ಬಳಗದಿಂದ ರವಿವಾರ ನಡೆದ 227ನೇ ರಾಯಣ್ಣ ಉತ್ಸವ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಅಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಜನಾರ್ದನ್‌ ಕೊಡವೂರು ಪ್ರಸ್ತಾವನೆಗೈದರು.

ನಗರಸಭೆ ಸದಸ್ಯ ವಿಜಯ ಕೊಡವೂರು ದಿಕ್ಸೂಚಿ ಭಾಷಣ ಮಾಡಿದರು. ತ್ರಿಷಿಕಾ ಹಿಂದುಳಿದ ಮಹಿಳಾ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ಭಾಗ್ಯಶ್ರೀ ಬಾಬಣ್ಣ, ತುಳುಕೂಟದ ಅಧ್ಯಕ್ಷೆ ಜಯಕರ ಶೆಟ್ಟಿ ಇಂದ್ರಾಳಿ, ಬಾಗಲಕೋಟೆಯ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಬರಮು ಪೂಜಾರಿ, ಉಡುಪಿಯ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಡೊಳ್ಳಿನ, ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಹನುಮಂತ ಜಿ.ಗೋಡಿ, ಶಿವಾನಂದ ಕೋಳ್ಕರ್‌, ರಾಜು ಬೋಳನ್ನವರ್‌ ಉಪಸ್ಥಿತರಿದ್ದರು.

ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಸುರೇಶ್‌ ಗೋಕಾಕ್‌, ಸಮಾಜ ಸೇವಕ ಈಶ್ವರ್‌ ಮಲ್ಪೆ ಆವರಿಗೆ ರಾಯಣ್ಣ ಪುರಸ್ಕಾರ ಪ್ರದಾನ ಮಾ ಡಿದರು.

Advertisement

Udayavani is now on Telegram. Click here to join our channel and stay updated with the latest news.

Next