Advertisement

ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜ ಸೇವೆಗಾಗಿ ಸ್ಮರಣೀಯರು : ಪ್ರಧಾನಿ ಸಂತಾಪ

11:34 PM Jan 02, 2023 | Team Udayavani |

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ 6 ಗಂಟೆಗೆ ಲಿಂಗೈಕ್ಯರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯಾತೀಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

”ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು. ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿ.”ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಸಿಎಂ ಸಂತಾಪ
”ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಚಿವರು ಶಾಸಕರು ಸೇರಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next