Advertisement

ಶ್ರೀ ಶಿವಕುಮಾರ ಸ್ವಾಮೀಜಿ ಜನರ ಹೃದಯದಲ್ಲಿ ಅಮರ : ಪ್ರಧಾನಿ ಮೋದಿ

03:32 PM Apr 01, 2022 | Team Udayavani |

ನವದೆಹಲಿ: ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

Advertisement

ಇನ್ನೊಂದು ಟ್ವೀಟ್ ನಲ್ಲಿ, ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಕನ್ನಡದಲ್ಲೇ ಟ್ವೀಟ್ ಮಾಡಲಾಗಿದೆ.

ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ ಡಾ: ಶ್ರೀ ಶಿವಕುಮಾರ *ಮಹಾಶಿವಯೋಗಿಗಳ 115ನೇ ಜಯಂತೋತ್ಸವ ಹಾಗೂ “ ಗುರುವಂದನಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಭಾಗಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next