Advertisement
ಅವರು ಶನಿವಾರ ನೀಲಾವರ ಗೋ ಶಾಲೆ ವಠಾರದಲ್ಲಿ ಅರಣ್ಯ ಇಲಾಖೆ ಮತ್ತು ಶ್ರೀ ಪೇಜಾವರ ಮಠದ ಸಹಯೋಗದಲ್ಲಿ ನಿರ್ಮಿಸಲಾಗುವ ಸ್ಮೃತಿ ವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.2023ರ ಫೆಬ್ರವರಿ ಒಳಗೆ ಒಂದು ಹಂತವನ್ನು ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೃಷಿಕರಿಗೆ ಉಪಟಳ ನೀಡುತ್ತಿರುವ ಮಂಗಗಳ ನಿಯಂತ್ರಣಕ್ಕೆ ಅಧಿಕಾರಿ ಗಳೊಂದಿಗೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಸ್ಮತಿವನ ಪ್ರದೇಶದಲ್ಲಿ ಈಗಾಗಲೇ ಇರುವ ಗಿಡಮರಗಳಿಗೆ ಯಾವುದೇ ಹಾನಿ ಮಾಡದೇ ಅಪರೂಪದ ಸಸ್ಯವನವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ವನದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜೀವನವನ್ನು ಬಿಂಬಿಸುವ ಮ್ಯೂಸಿಯಂ ಸ್ಥಾಪನೆ ಮತ್ತು ತಣ್ತೀಶಾಸ್ತ್ರ ಅಧ್ಯಯನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು, ವಾತಾವರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್ ಸೇರ್ಪಡೆ ಮಾಡುವ ಉಪಕರಣಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಬೆಳೆ ಹಾನಿ ಮಾಡುವ ಮಂಗಗಳನ್ನು ಕುದ್ರು ಪ್ರದೇಶಗಳಲ್ಲಿ ಬಿಟ್ಟು, ಆಹಾರ ವ್ಯವಸ್ಥೆ ಮಾಡುವುದರಿಂದ ನಿಯಂತ್ರಣ ಸಾಧ್ಯವಿದೆ ಎಂದರು.
Related Articles
Advertisement
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಸ್ವಾಗತಿಸಿ, ವಾಸುದೇವ ಭಟ್ ಪೆರಂಪಳ್ಳಿ ನಿರೂಪಿಸಿ, ವಂದಿಸಿದರು.