Advertisement

ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಗೌರವ: ನೀಲಾವರದಲ್ಲಿ ಸ್ಮೃತಿವನಕ್ಕೆ ಶಂಕುಸ್ಥಾಪನೆ

10:57 PM May 07, 2022 | Team Udayavani |

ಬ್ರಹ್ಮಾವರ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಗೌರವಾರ್ಥ 2 ಕೋಟಿ ರೂ. ವೆಚ್ಚದಲ್ಲಿ ನೀಲಾವರದಲ್ಲಿ ನಿರ್ಮಿಸಲಿರುವ ಸ್ಮೃತಿ ವನಕ್ಕೆ 2 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್‌ ಕತ್ತಿ ಹೇಳಿದರು.

Advertisement

ಅವರು ಶನಿವಾರ ನೀಲಾವರ ಗೋ ಶಾಲೆ ವಠಾರದಲ್ಲಿ ಅರಣ್ಯ ಇಲಾಖೆ ಮತ್ತು ಶ್ರೀ ಪೇಜಾವರ ಮಠದ ಸಹಯೋಗದಲ್ಲಿ ನಿರ್ಮಿಸಲಾಗುವ ಸ್ಮೃತಿ ವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
2023ರ ಫೆಬ್ರವರಿ ಒಳಗೆ ಒಂದು ಹಂತವನ್ನು ಮುಕ್ತಾಯಗೊಳಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೃಷಿಕರಿಗೆ ಉಪಟಳ ನೀಡುತ್ತಿರುವ ಮಂಗ‌ಗಳ ನಿಯಂತ್ರಣಕ್ಕೆ ಅಧಿಕಾರಿ ಗಳೊಂದಿಗೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದರು.

ತಣ್ತೀಶಾಸ್ತ್ರ ಅಧ್ಯಯನಕ್ಕೆ ವ್ಯವಸ್ಥೆ
ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್‌ ಮಾತನಾಡಿ, ಸ್ಮತಿವನ ಪ್ರದೇಶದಲ್ಲಿ ಈಗಾಗಲೇ ಇರುವ ಗಿಡಮರಗಳಿಗೆ ಯಾವುದೇ ಹಾನಿ ಮಾಡದೇ ಅಪರೂಪದ ಸಸ್ಯವನವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ವನದಲ್ಲಿ ವಿಶ್ವೇಶತೀರ್ಥ ಶ್ರೀಪಾದರ ಜೀವನವನ್ನು ಬಿಂಬಿಸುವ ಮ್ಯೂಸಿಯಂ ಸ್ಥಾಪನೆ ಮತ್ತು ತಣ್ತೀಶಾಸ್ತ್ರ ಅಧ್ಯಯನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು, ವಾತಾವರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಾರ್ಬನ್‌ ಸೇರ್ಪಡೆ ಮಾಡುವ ಉಪಕರಣಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಬೆಳೆ ಹಾನಿ ಮಾಡುವ ಮಂಗಗಳನ್ನು ಕುದ್ರು ಪ್ರದೇಶಗಳಲ್ಲಿ ಬಿಟ್ಟು, ಆಹಾರ ವ್ಯವಸ್ಥೆ ಮಾಡುವುದರಿಂದ ನಿಯಂತ್ರಣ ಸಾಧ್ಯವಿದೆ ಎಂದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಎಸ್‌. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಆಶೀಸರ, ಮಂಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿ ಪ್ರಕಾಶ್‌ ಎಸ್‌. ನೆಟಾಲ್ಕರ್‌, ಕುಂದಾಪುರ ಡಿಎಫ್‌ಒ ಆಶೀಶ್‌ ರೆಡ್ಡಿ, ಡಿಎಫ್‌ಒಗಳಾದ ಡಾ| ದಿನೇಶ್‌ ಕುಮಾರ್‌, ಗಣಪತಿ, ಪಂಚಾಯತ್‌ ಅಧ್ಯಕ್ಷ ಮಹೇಂದ್ರ ಕುಮಾರ್‌ ಉಪಸ್ಥಿತರಿದ್ದರು.

Advertisement

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್‌ ಲೋಬೊ ಸ್ವಾಗತಿಸಿ, ವಾಸುದೇವ ಭಟ್‌ ಪೆರಂಪಳ್ಳಿ ನಿರೂಪಿಸಿ, ವಂದಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next