Advertisement
ಅಲ್ಲದೆ, ವಿಕ್ರಮಸಿಂಘೆ ಅವರನ್ನು ವಜಾಗೊಳಿಸಿ ಅಸ್ಥಿರತೆ ಸೃಷ್ಟಿಸಿದ ಸಿರಿಸೇನಾ ಅವರನ್ನು ಸ್ಪೀಕರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಸಿರಿಸೇನಾಗೆ ತೀವ್ರ ಮುಖಭಂಗವಾಗಿದೆ. ಶುಕ್ರವಾರ ರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ವಿಕ್ರಮ ಸಿಂಘೆ ಅವರನ್ನು ಏಕಾಏಕಿ ವಜಾಗೊಳಿಸಿದ್ದ ಸಿರಿಸೇನಾ ಅವರು, ರಾಜಪಕ್ಸೆಯನ್ನು ನೂತನ ಪ್ರಧಾನಿ ಎಂದು ಘೋಷಿಸಿದ್ದರು. ಲಂಕಾ ರಾಜಕೀಯ ಬಿಕ್ಕಟ್ಟು ಕುರಿತು ಪ್ರತಿಕ್ರಿಯಿಸಿರುವ ಭಾರತ ಸರಕಾರ, ನಾವು ಶ್ರೀಲಂಕಾದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಾಂವಿಧಾನಿಕ ಪ್ರಕ್ರಿಯೆಗಳಿಗೆ ಗೌರವ ನೀಡಲಾಗುತ್ತದೆ ಎಂಬ ವಿಶ್ವಾಸ ನಮಗಿದೆ ಎಂದಿದೆ.
ಈ ನಡುವೆ ಕೊಲೊಂಬೋದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಗುಂಡೇಟಿಗೆ ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಅಧ್ಯಕ್ಷ ಸಿರಿಸೇನಾ ಅವರ ಬೆಂಬಲಿಗರ ಗುಂಪೊಂದು ರವಿವಾರ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಅಪಹರಿಸಲು ಯತ್ನಿಸಿದ್ದು, ಈ ವೇಳೆ ರಣತುಂಗ ಅವರ ಅಂಗರಕ್ಷಕರು ಗುಂಡಿನ ದಾಳಿ ನಡೆಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಆಗ ಗುಂಡೇಟು ತಗುಲಿದ ಒಬ್ಬ ವ್ಯಕ್ತಿ ಅಸುನೀಗಿದ್ದಾರೆ.