Advertisement

ಶ್ರೀಮದ್‌ ಸುಧೀಂದ್ರತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷಾ ಅಮೃತ ಮಹೋತ್ಸವ

04:14 PM Jun 18, 2019 | Vishnu Das |

ಮುಂಬಯಿ: ಶ್ರೀ ಕಾಶೀ ಮಠ ಸಂಸ್ಥಾನದ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷಾ ಅಮೃತ ಮಹೋತ್ಸವವು ಹರಿದ್ವಾರದ ಶ್ರೀ ವ್ಯಾಸ ಮಂದಿರದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

Advertisement

ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್‌ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಇತ್ತೀಚೆಗೆ ವಿಜೃಂಭಣೆಯಿಂದ ಜರಗಿದ ಈ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ವಿಶೇಷ ಹೋಮ-ಹವನಗಳು, ಮುಖ್ಯಪ್ರಾಣ ದೇವರಿಗೆ ಒಂದು ಸಹಸ್ರ ಪವಮಾನ ಅಭಿಷೇಕವನ್ನು ಆಯೋಜಿಸಲಾಗಿತ್ತು.

ರಾಜಸ್ಥಾನದ ಜೈಪುರದಲ್ಲಿ ಅಮೃತ ಶಿಲೆಯಲ್ಲಿ ಬೃಹತ್‌ ಗಾತ್ರದಲ್ಲಿ ನಿರ್ಮಿಸಲಾದ ಶ್ರೀಮದ್‌ ಸುಧೀಂದ್ರತೀರ್ಥ ಸ್ವಾಮೀಜಿಯವರ ವಿಗ್ರಹ ಪ್ರತಿಷ್ಠಾಪನೆಯು ಗಂಗಾತಟದಲ್ಲಿ ನಡೆಯಿತು. ದೇಶದ ವಿವಿಧ ಭಾಗಗಳಿಂದ ಐದು ಸಾವಿರಕ್ಕೂ ಅಧಿಕ ಶ್ರೀ ಕಾಶೀ ಮಠದ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಶ್ರೀಗಳ ಕೃಪೆಗೆ ಪಾತ್ರರಾದರು.

Advertisement

Udayavani is now on Telegram. Click here to join our channel and stay updated with the latest news.

Next