Advertisement

ಶೃಂಗೇರಿ ಶಾರದಾ ಪೀಠಕ್ಕೆ ಸಚಿವ ನಾಗೇಶ್‌ ಭೇಟಿ

06:59 PM Aug 30, 2021 | Team Udayavani |

ಶೃಂಗೇರಿ: ಶಿಕ್ಷಣಸಚಿವಬಿ.ಸಿ.ನಾಗೇಶದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಆಶೀರ್ವಾದ ಪಡೆದರು.

Advertisement

ಶನಿವಾರ ರಾತ್ರಿ ಶ್ರೀ ಶಾರದಾ ಪೀಠಕ್ಕೆ ಆಗಮಿಸಿ ವಾಸ್ತವ್ಯ ಮಾಡಿದ್ದ ಸಚಿವರು ಭಾನುವಾರ ಬೆಳಗ್ಗೆ ಶ್ರೀಮಠದ ಹೊರ ಪ್ರಾಂಗಣದ ಶ್ರೀ ತೋರಣ ಗಣಪತಿ, ಶ್ರೀ ಶಂಕರಾಚಾರ್ಯ ದೇವಸ್ಥಾನ ಹಾಗೂ ಶ್ರೀ ಶಾರದಾಂಬಾ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನರಸಿಂಹವನದಲ್ಲಿರುವ ಗುರುಭವನಕ್ಕೆ ತೆರಳಿದ ಸಚಿವರು ಚಾತುರ್ಮಾಸ್ಯ ವ್ರತದಲ್ಲಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.30ರಿಂದ ರಾಜ್ಯದಲ್ಲಿ ಪ್ರಾಥಮಿಕ ಹಂತದ ಶಾಲೆ ಆರಂಭಿಸಲು ಸೋಮವಾರ ತಜ್ಞರ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗುವುದು. ಕೋವಿಡ್‌ ನಿಯಮ ಪಾಲಿಸಿ ಅಗತ್ಯ ಮುನ್ನೆಚರಿಕೆ ‌c ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗುವುದು.

ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ ಲಾಗುತ್ತಿದೆ. ಈಗಾಗಲೇ ಬೇರೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಿಸಲಾಗಿದೆ.

ರಾಜ್ಯದಲ್ಲಿ ಪದವಿ ತರಗತಿಗಳು ಆರಂಭಗೊಂಡಿದ್ದು, ಯಾವುದೇ ಸಮಸ್ಯೆ ಉಂಟಾಗಿಲ್ಲ. ಕೋವಿಡ್‌ ಮೂರನೇ ಅಲೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದ್ದು ಲಸಿಕಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸಾರ್ವಜನಿಕರು ಹಾಗೂ ಪೋಷಕರ ಸಹಕಾರ ಅಗತ್ಯವಾಗಿದೆ ಎಂದರು. ಪಕ್ಷದ ಮುಖಂಡರಾದ ಎ.ಎಸ್‌. ನಯನ, ಹರೀಶ್‌ ಶೆಟಿ, ಚೇತನ್‌ ಹೆಗ್ಡೆ, ಟಿ.ಕೆ. ಪರಾಶರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌.ಜಿ. ರಾಘವೇಂದ್ರ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next