Advertisement

ಮತ ಕೇಳಲು ಶ್ರೀರಾಮುಲುಗೆ ನಾಚಿಕೆಯಾಗಬೇಕು

06:00 AM Oct 29, 2018 | Team Udayavani |

ಕುರುಗೋಡು: ಬಳ್ಳಾರಿಯಲ್ಲಿ ಲೋಕಸಭಾ ಉಪ ಚುನಾವಣೆ ನಡೆಯುತ್ತಿರುವುದಕ್ಕೆ ಶ್ರೀರಾಮುಲು ಕಾರಣರಾಗಿದ್ದಾರೆ. ಜನರ ಸೇವೆ ಮಾಡಲು ಆಗದೆ ರಾಜೀನಾಮೆ ನೀಡಿದ ಅವರು, ತಮ್ಮ ಸಹೋದರಿ ಜೆ. ಶಾಂತಾ ಪರ ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

Advertisement

ಕಲ್ಲುಕಂಬ ಗ್ರಾಮದಲ್ಲಿ ಭಾನುವಾರ ಪ್ರಚಾರ ಭಾಷಣ ಮಾಡಿದ ಅವರು, ಶ್ರೀರಾಮುಲು ವಿರುದಟಛಿ ವಾಗ್ಧಾಳಿ ನಡೆಸಿದರು. ಈಗಾಗಲೇ ಶ್ರೀರಾಮುಲು ಅವರು ಅಧಿಕಾರದ ಆಸೆಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳ್ಳಾರಿ ಜನರಿಗೆ ಅನ್ಯಾಯವೆಸಗಿದ್ದಾರೆ. ಈಗ ಮತ್ತೆ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಪರಿಶಿಷ್ಟ ಪಂಗಡ ವರ್ಗದಿಂದ ತಮ್ಮ ಸಹೋದರಿ ಜೆ. ಶಾಂತಾ ಅವರನ್ನು ಕಣಕ್ಕಿಳಿಸಿದ್ದಾರೆ. ಶಾಂತಾ ಅವರನ್ನು ಬಿಟ್ಟು ಸ್ಪರ್ಧೆಗಿಳಿಯಲು ಅವರಿಗೆ ಬೇರೆ ಯಾರೂ ಸಿಗಲಿಲ್ಲವೋ ಅಥವಾ ತಮ್ಮ ಕುಟುಂಬದ ಸದಸ್ಯರು ಮಾತ್ರ ಸ್ಪರ್ಧಿಸಬೇಕು ಅಂತ ಅವರು ತೀರ್ಮಾನ ಮಾಡಿದ್ದಾರೋ ಗೊತ್ತಿಲ್ಲ ಎಂದರು.

ಜೆ.ಶಾಂತಾ ಅವರು ಶಾಸಕರು, ಸಂಸದರಾಗಿದ್ದವರು. ಅವರ ಅವಧಿಯಲ್ಲಿ ಎಷ್ಟು ಬಾರಿ ಸಂಸತ್‌ಗೆ ಹೋಗಿ ಅನುದಾನ
ತಂದು ಬಳ್ಳಾರಿ ಮತ್ತು ಸುತ್ತಮುತ್ತ ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದಾರೆ ತೋರಿಸಲಿ ಎಂದು ಸವಾಲೆಸೆದರು. ಈ ಬಾರಿ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಜಯ ಗಳಿಸಲಿದೆ. ಬಿಜೆಪಿಗೆ ಮುಖಭಂಗ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ರಾಜ್ಯದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು ಅನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನಡೆಸಿದ್ದಾರೆ. ಕಾಂಗ್ರೆಸ್‌ನ ಜನಪರ ಯೋಜನೆಗಳು ಹಾಗೂ ಬಳ್ಳಾರಿ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಅವರಿಗೆ ಮತ ನೀಡಿ ಗೆಲುವಿಗೆ ಸಹಕರಿಸಬೇಕು. 
● ಡಿ.ಕೆ. ಶಿವಕುಮಾರ್‌, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next