ಶ್ರೀರಂಗಪಟ್ಟಣ : ತಾಲೂಕಿನ ಕೆಆರ್ಎಸ್ ಗ್ರಾಮದ ಬಜಾರ್ ಲೈನ್ ಬಡಾವಣೆಯಲ್ಲಿ ಕಳೆದ ಶನಿವಾರ ತಡರಾತ್ರಿ ಮಹಿಳೆ ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಐದು ಮಂದಿಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಸಾವಿರಾರು ಮಂದಿ ಸಾರ್ವಜನಿಕರು ಠಾಣೆ ಎದುರು ಜಮಾವಣೆಗೊಂಡ ಘಟನೆ ನಡೆದಿದೆ.
ಸಾರ್ವಜನಿಕರು ಐವರ ಸಾವಿಗೆ ಕಾರಣರಾದ ಆರೋಪಿಯನ್ನು ಠಾಣೆಯಿಂದ ಹೊರಗೆ ಕಳುಹಿಸಿಕೊಂಡಿ, ಆ ಆರೋಪಿಗಳನ್ನ ಇಲ್ಲೆ ಸಾರ್ವಜನಿಕವಾಗಿ ನಾವೇ ಹತ್ಯೆ ಮಾಡುತ್ತೇವೆ ಎಂದು ಪೊಲೀಸರನ್ನು ಒತ್ತಾಯಿಸಿದ ಘಟನೆ ನಡೆದಿದೆ.
ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಇನ್ನು ಪ್ರಕರಣ ತನಿಖೆ ಹಂತದಲ್ಲಿದೆ, ಸಾರ್ವಜನಿಕರು ತನಿಖೆಗೆ ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿ ಗುಂಪನ್ನು ಚದುರಿಸಿದ್ದಾರೆ.
ಇದನ್ನೂ ಓದಿ :ಹಿಜಾಬ್ ಪ್ರಕರಣದ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಾಗಲಿ: ಬಿ.ಸಿ. ನಾಗೇಶ್