ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿಭಾ ಜ್ಞಾನ ವಿಕಾಸ ಕೇಂದ್ರ ಸೂಡ ಮತ್ತು ಸೂಡ ಜನನಿ ಮಹಿಳಾ ಮಂಡಳಿಯ ಜಂಟಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯು ಬೆಳ್ಮಣ್ ಗ್ರಾ.ಪಂ.ಅಧ್ಯಕ್ಷೆ ವಾರಿಜಾ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸೂಡ ಸರಕಾರಿ ಕಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ ಬಸೂÅರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಚಂದ್ರಪ್ರಭಾ ಹೆಗ್ಡೆ ಮಾತನಾಡಿ, ಧಾರ್ಮಿಕವಾಗಿ,ಸಾಂಸ್ಕೃತಿಕವಾಗಿ ಮತ್ತು ಸಾಂಸಾರಿಕವಾಗಿ ಮಹಿಳೆಗೆ ಗುರು ತರವಾದ ಹೊಣೆಗಾರಿಕೆಯಿದೆ. ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ತರವಾಗಿದ್ದು, ಉತ್ತಮ ಸಮಾಜದ ಬೆಳವಣಿಗೆಯೊಂದಿಗೆ ಸಾಂಘಿಕ ಹೋರಾಟದಲ್ಲಿ ತೊಡಗಿಸಿಕೊಂಡಲ್ಲಿ ಮಹಿಳೆಯರ ಅಭಿವೃದ್ಧಿ ಸಾಧ್ಯ ಎಂದರು.
ವಿಶೇಷ ಅತಿಥಿಯಾಗಿ ಆಗಮಿಸಿದ ಬಹುಭಾಷಾ ನಟಿ ಪಿಲಾರು ಮಜಲ ಬೆಟ್ಟು ಬೀಡು ಶುಭಾ ಪೂಂಜಾ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನ ಸ್ವೀಕರಿಸಿದ ಶುಭಾ ಪೂಂಜಾ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರ ಸಂಘಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಸೂಡ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಸ್ಮಿತಾ ಆರ್. ಶೆಟ್ಟಿ, ಸೂಡ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಮಲ್ಲಿಕಾ ಕೆ.ಆರ್, ಸರಕಾರಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಶಕುಂತಳಾ, ಜ್ಞಾನ ವಿಕಾಸ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ಮಲ್ಲಿಕಾ, ಜನನಿ ಮಹಿಳಾ ಮಂಡಲದ ಅಧ್ಯಕ್ಷೆ ದೀಪಿಕಾ ಅಶೋಕ್ ವೇದಿಕೆಯಲ್ಲಿದ್ದರು.
ಒಕ್ಕೂಟದ ಸೇವಾ ಪ್ರತಿನಿಧಿ ರಜನಿ ದ್ವಾರಕನಾಥ ಜೋಗಿ ಸ್ವಾಗತಿಸಿದರು.ಸಹನಾ ಕುಂದರ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾಲಕೀÒ$¾ ಭಟ್ ವಂದಿಸಿದರು.