Advertisement

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

07:31 PM Oct 23, 2024 | Team Udayavani |

ನಟಿಮಣಿಯರು ಪುಸ್ತಕ ಬರೆಯುವುದು ಕಡಿಮೆ. ಅದರಲ್ಲೂ ತಮ್ಮ ಸಿನಿ ಪಯಣ, ಅನುಭವವನ್ನು ದಾಖಲಿಸಿಕೊಳ್ಳುವುದು ತೀರಾ ವಿರಳ. ಆದರೆ, ಶ್ವೇತಾ ಶ್ರೀವಾಸ್ತವ್‌ ಇಂತಹ ಒಂದು ಪ್ರಯತ್ನ ಮಾಡಿದ್ದಾರೆ.

Advertisement

2006 ರಲ್ಲಿ ʼಮುಖಾಮುಖಿʼ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟಿ ಶ್ವೇತಾ ಶ್ರೀವಾಸ್ತವ್‌, ʼಸಿಂಪಲ್ಲಾಗ್‌ ಒಂದ್‌ ಲವ್‌ಸ್ಟೋರಿʼ, ʼಕಿರೂಗೂರಿನ ಗಯ್ಯಾಳಿಗಳುʼ, ʼರಾಘವೇಂದ್ರ ಸ್ಟೋರ್ʼ, ʼಹೋಪ್‌ʼ ಮುಂತಾದ ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ʼ

ಈಗ ಎರಡು ದಶಕಗಳ ತಮ್ಮ ಸಿನಿಮಾ ಜರ್ನಿಯ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿದ್ದಾರೆ. ಈ ಪುಸ್ತಕಕ್ಕೆ “ರೆಕ್ಕೆ ಇದ್ದರೆ ಸಾಕೆ’ ಎಂದು ಹೆಸರಿಟ್ಟಿದ್ದಾರೆ. ಇಂಗ್ಲಿಷ್‌ನಲ್ಲೂ (against the grain) ಈ ಪುಸ್ತಕ ಲಭ್ಯವಿದೆ.

ಇತ್ತೀಚೆಗೆ ನಯನ ಸಭಾಂಗಣದಲ್ಲಿ ಶ್ವೇತಾ ಶ್ರೀವಾಸ್ತವ್‌ ಈ ಪುಸ್ತಕ ಅನಾವರಣಗೊಳಿಸಿ ಮಾಧ್ಯಮದ ಮುಂದೆ ಮಾತನಾಡಿದರು.

“ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ಸಮುದಾಯದ ಪ್ರಗತಿಯನ್ನು ಅಳೆಯಬೇಕು ಎಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಹೇಳಿದ್ದಾರೆ. ಅಂಬೇಡ್ಕರ್‌ ಅವರು ಹೇಳಿದ ಮಾತು ಎಲ್ಲಾ ರಂಗಕ್ಕೂ ಅನ್ವಯಿಸುತ್ತದೆ. ಇನ್ನು, ಹೆಣ್ಣುಮಕ್ಕಳು ಮದುವೆ ಆದ ನಂತರ ಚಿತ್ರದಲ್ಲಿ ನಾಯಕಿಯಾಗಿ ನಟಿಸಬಾರದು ಎಂಬುದು ಎರಡು ದಶಕಗಳ ಹಿಂದೆ ನಾನು ನಟಿಸಲು ಆರಂಭಿಸಿದಾಗಲೂ ಇತ್ತು. ಈಗಲೂ ಇದೆ. ಅದಕ್ಕೆ ಕಾರಣ ಏನು? ಹೆಣ್ಣು ಸ್ವಾವಲಂಬಿ ಅಲ್ಲವೇ? ಆಕೆ ಯಾವುದೇ ಕ್ಷೇತ್ರದಲ್ಲಿ ಏನಾದರೂ ಸಾಧಿಸಬೇಕು ಎಂದರೆ, ಆಕೆ ಗಂಡ ಅಥವಾ ತಂದೆಯ ಹೆಸರಿನ ಜೊತೆಗೆ ಗುರುತಿಸಿಕೊಳ್ಳುತ್ತಾಳೆ. ಈ ಪರಿಸ್ಥಿತಿ ಎಲ್ಲಾ ಕಾಲದಲ್ಲೂ ಪ್ರಸ್ತುತ. ಹಾಗಂತ ನಮ್ಮ ಸಾಧನೆಗೆ ಮನೆಯವರ ಸಹಕಾರ ಬೇಡ ಅಂತ ನಾನು ಹೇಳುತ್ತಿಲ್ಲ. ವಾಸ್ತವದ ಬಗ್ಗೆ ಮಾತನಾಡುತ್ತೇನೆ ಅಷ್ಟೆ. ಸರಿಸುಮಾರು ಇಪ್ಪತ್ತು ವರ್ಷಗಳ ನನ್ನ ಸಿನಿ ಬದುಕನ್ನು ಸಾಧನೆ ಅಂತ ನಾನು ಕರೆದುಕೊಳ್ಳುತ್ತೇನೆ. ಈ ಸಮಯದಲ್ಲಿ ನಾನು ಎದುರಿಸಿದ ಸವಾಲುಗಳು, ಸನ್ನಿವೇಶಗಳು ಹಾಗೂ ಸಂತೋಷದ ವಿಚಾರಗಳು ಎಲ್ಲವನ್ನು ಈ ಪುಸ್ತಕದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next