ನಟಿ ಶ್ವೇತಾ ಶ್ರೀವಾ ಸ್ತವ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಹೋಪ್’ ಚಿತ್ರ ತನ್ನ ಚಿತ್ರೀಕರಣ ಮುಗಿಸಿ, ಈಗ ಪೋಸ್ಟ್ ಪ್ರೊಡಕ್ಷನ್‌ನಲ್ಲಿ ತೊಡಗಿದೆ. ಈಗಾಗಲೇ ಚಿತ್ರದ ಪೋಸ್ಟರ್‌ವೊಂದು ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆಯುತ್ತಿದೆ.
ಇನ್ನು, ಈ ಚಿತ್ರದಲ್ಲಿ ಸುಮಲತಾ ಅಂಬರೀಶ್ ಕೂಡಾ ಪ್ರಮುಖ ಪಾತ್ರ ಮಾಡಿದ್ದು, ಮುಖ್ಯಮಂತ್ರಿಯಾಗಿ ನಟಿಸಿದ್ದಾರೆ. ಈ ಹಿಂದೆ “ಜ್ವಲಂತಂ’ ಸಿನಿಮಾ ನಿರ್ದೇಶಿಸಿದ ಅಂಬರೀಶ್ ಎಂ ಈ ಚಿತ್ರದ ನಿರ್ದೇಶಕರು. ಚಿತ್ರವನ್ನು ವರ್ಷಾ ಸಂಜೀವ್ ನಿರ್ಮಿಸಿದ್ದಾರೆ.
ಇದನ್ನೂ ಓದಿ:ಅಣ್ಣಾವ್ರ ಚಿತ್ರಗಳಲ್ಲಿ ಕನ್ನಡ ಸಾಹಿತ್ಯದ ಕಂಪು
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಅಂಬರೀಶ್, ಇದು ಹೊಸ ಜಾನರ್ ಸಿನಿಮಾ. ಇಲ್ಲಿ ಆಡಳಿತಾತ್ಮಕ ವಿಚಾರವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇನೆ. ಮುಖ್ಯವಾಗಿ ದೊಡ್ಡ ದೊಡ್ಡ ಹುದ್ದೆಗಳ ನೇಮಕಾತಿಯಲ್ಲಿ ನಡೆಯುವ ರಾಜಕೀಯ, ಅಧಿಕಾರಿಗಳ, ರಾಜಕಾರಣಿಗಳ ಬೇಜವಾಬ್ದಾರಿಯಿಂದ ಸಾಮಾನ್ಯ ಜನರು ಅನುಭವಿಸುವ ಕಷ್ಟಗಳ ಸುತ್ತ ಇಲ್ಲಿ ಹೇಳಿದ್ದೇವೆ’ ಎನ್ನುತ್ತಾರೆ.
ಈ ಚಿತ್ರದಲ್ಲಿ ಶ್ವೇತಾ ಶ್ರೀವಾಸ್ತವ್ ಕೆಎಎಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ,, ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ ಅನೇಕರು ನಟಿಸಿದ್ದಾರೆ