ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ.
ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಇದನ್ನೂ ಓದಿ : ಗುಜರಾತ್ ಚುನಾವಣೆ: ಅದೃಷ್ಟ ಪರೀಕ್ಷೆಗಿಳಿದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ