Advertisement

ಲಕ್ಷ್ಮೇಶ್ವರ ಪ್ರಕರಣ ಸಿಐಡಿಗೆ: ಪರಮೇಶ್ವರ್‌

03:45 AM Feb 07, 2017 | |

ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ಠಾಣಾ ಪೊಲೀಸರ ವಶದಲ್ಲಿದ್ದ  ಲಾರಿ ಚಾಲಕ ಶಿವಪ್ಪ ದುಂಡಪ್ಪ ಭದ್ರಾಪುರ ಅಲಿಯಾಸ್‌ ಗೋಣಿ (23) ಎಂಬಾತ ಮೃತಪಟ್ಟ ಪ್ರಕರಣ ಹಾಗೂ ಪೊಲೀಸ್‌ ಠಾಣೆ, ಜೀಪ್‌ಗೆ ಬೆಂಕಿ ಹಚ್ಚಿದ ಘಟನೆಗಳ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಠಾಣೆ ಮತ್ತು ಜೀಪ್‌ಗೆ ಬೆಂಕಿ ಹಚ್ಚಿದ್ದರ ಹಿಂದೆ ಅಲ್ಲಿನ ಮರಳು ಮಾಫಿಯಾದ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 25ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಘಟನೆ ಸಂಬಂಧ ಪೊಲೀಸರು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆ ನಡೆಸಿ ಘಟನೆಗೆ ಕಾರಣರಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದರು.

ಭಾನುವಾರವಷ್ಟೇ ಲಕ್ಷ್ಮೇಶ್ವರ ಪೊಲೀಸ್‌ ಠಾಣೆಯಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಾಗಿದೆ ಎಂಬ ಕಾರಣದಿಂದ ರೊಚ್ಚಿಗೆದ್ದ ಸ್ಥಳೀಯ ಜನ ಠಾಣೆಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದರು. ಅಲ್ಲದೆ ಪೊಲೀಸ್‌ ವಾಹನಗಳಿಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next