Advertisement
ಸಮೀಪದ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗರ್ಜಿನಾಳ ಉಪ ಕೇಂದ್ರವಾದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಳೆದ ಒಂದುವರೆ ತಿಂಗಳಿಂದ ಬೀಗ ಹಾಕಿದ್ದು ಸಾರ್ವಜನಿಕರ ಸೂಕ್ತ ಚಿಕಿತ್ಸೆಯಿಲ್ಲದೆ ಪರದಾಡುವಂತಾಗಿದೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Advertisement
ಇದನ್ನೂ ಓದಿ:ವಿಷಯವನ್ನು ಅತಿರಂಜಿತಗೊಳಿಸಬೇಡಿ…ಹಿಜಾಬ್ ಮೇಲ್ಮನವಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ
ಕೇಂದ್ರದಲ್ಲಿ ಮೂರು ಹುದ್ದೆಗಳಿದ್ದು, ಈ ಮೂರು ಹುದ್ದೆಗಳು ಸದ್ಯ ಖಾಲಿ ಇರುವದರಿಂದ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ. ಇದರ ಬಗ್ಗೆ ಮಾಹಿತಿಯಿದ್ದರೂ ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಬೇಕಾದ ಆರೋಗ್ಯ ಇಲಾಖೆಯವರು ಮೂಕಪ್ರೇಕ್ಷಕರಾಗಿ ಕುಳಿತಿರುವುದು ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ.
ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆ ಖಾಲಿ ಇದ್ದು, ಎ.ಎನ್.ಎಮ್ ಅವರು ಹೆರಿಗೆ ರಜೆ ಹೋದ ಕಾರಣ ಈ ಉಪಕೇಂದ್ರದಲ್ಲಿ ಯಾವುದೇ ಸಿಬ್ಬಂದಿಗಳು ಇಲ್ಲದ ಕಾರಣ ಕೇಂದ್ರಕ್ಕೆ ಬೀಗ ಹಾಕಲಾಗಿದೆ.
ಈ ಕೇಂದ್ರದ ವ್ಯಾಪ್ತಿಗೆ ಬರುವ ಹಳ್ಳಿಗರಲ್ಲಿ ಸಕ್ಕರೆ ಕಾಯಿಲೆ, ಮಧುಮೇಹ, ರಕ್ತದೊತ್ತಡ, ಕ್ಷಯರೋಗ, ಸೇರಿದಂತೆ ಇತರ ಕಾಯಿಲೆಗಳಿಂದ ಇರುವ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
ಗರ್ಜಿನಾಳ ಆರೋಗ್ಯ ಉಪಕೇಂದ್ರದ ಸಮಸ್ಯೆಯ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಲ್ಲಿ ಮೂರು ಹುದ್ದೆ ಖಾಲಿ ಇದ್ದರೆ, ವಾರದಲ್ಲಿ ಮೂರು ದಿನಗಳ ಕಾಲ ಬೇರೊಬ್ಬರನ್ನು ಅಲ್ಲಿಗೆ ಕಳಿಹಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆ. – ಡಾ.ಆನಂದ ಗೋಟೂರ ತಾಲೂಕು ಆರೋಗ್ಯಾಧಿಕಾರಿ ಕುಷ್ಟಗಿ
-ಮಲ್ಲಿಕಾರ್ಜುನ ಮೆದಿಕೇರಿ. ದೋಟಿಹಾಳ