Advertisement

ಉಚಿತ ಬಸ್‌ ಪಾಸ್‌ ವಿತರಿಸಲು ಆಗ್ರಹ

04:22 PM Jun 19, 2019 | Naveen |

ಸಿಂಧನೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ಎಬಿವಿಪಿ ನೇತೃತ್ವದಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸವೇಶ್ವರ ಸರ್ಕಲ್ದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ವಿವಿಧ ವೃತ್ತ, ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಬಿವಿಪಿ ಸಂಘಟನೆಯ ಚೆನ್ನಾರೆಡ್ಡಿ ಮಾತನಾಡಿ, 2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಎಸ್ಸಿ, ಎಸ್ಟಿ ಹಾಗೂ ರಾಜ್ಯದ ಎಲ್ಲ ಜಾತಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಈವರೆಗೆ ಯೋಜನೆ ಜಾರಿಗೆ ಬಂದಿಲ್ಲ. ರಾಜ್ಯ ಸರಕಾರ ವಿದ್ಯಾರ್ಥಿಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ. ರಾಜ್ಯ ಬರ ಆವರಿಸಿ ರೈತರು ಸಂಕಷ್ಟದಲ್ಲಿದ್ದಾರೆ. ಖಾಸಗಿ ಕಾಲೇಜುಗಳ ಡೊನೇಷನ್‌ ಹಾವಳಿ, ದುಬಾರಿ ಶುಲ್ಕದ ಹೊರೆಗೆ ರೈತ ಕುಟುಂಬ ಮತ್ತು ಬಡ ಕುಟುಂಬಗಳ ಮಕ್ಕಳು ಶಿಕ್ಷಣದಿಂದ ವಂಚಿತವಾಗುವಂತಾಗಿದೆ. ಇಂಥ ಸಂದರ್ಭದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಬೇಕು ಎಂದು ಆಗ್ರಹಿಸಿದರು

ನೂರಾರು ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next