Advertisement

ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್‌:ಮಠದಲ್ಲೇ ಚಿಕಿತ್ಸೆ

11:34 AM Dec 03, 2018 | |

ಬೆಂಗಳೂರು:ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಸೋಮವಾರ  ಬಿಜಿಎಸ್‌ ಗ್ಲೇನಿಗಲ್ಸ್‌ ಗ್ಲೋಬಲ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮಠಕ್ಕೆ ಮರಳಿದ್ದಾರೆ. 

Advertisement

ಶ್ರೀಗಳು ಮಠಕ್ಕೆ ಮರಳಲೇಬೇಕೆಂದು ಹಠಕ್ಕೆ ಬಿದ್ದಿದ್ದರು ಹೀಗಾಗಿ ಡಿಸ್ಚಾರ್ಜ್‌ ಮಾಡಲಾಗುತ್ತಿದೆ.ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆದರೆ ವೈದ್ಯರು ಮುಂದಿನ 5 ದಿನಗಳ ಕಾಲ ಮಠದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದಿದ್ದಾರೆ. 

ಶ್ರೀಗಳ ಆಚಾರ ವಿಚಾರಕ್ಕೆ ತೊಂದರೆಯಾಗದಂತೆ ಚಿಕಿತ್ಸೆ ನೀಡಲಾಗುತ್ತದೆ ಮಠದ ಪ್ರತಿನಿಧಿಗಳು ತಿಳಿಸಿದ್ದಾರೆ. 

ಪಿತ್ತನಾಳ ಹಾಗೂ ಮೇದೋಜೀರಕ ಗ್ರಂಥಿ ಸಮಸ್ಯೆಯಿಂದ ಬಳಲುತ್ತಿರುವ ಸ್ವಾಮೀಜಿಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ.ವೈದ್ಯರು ಭಾನುವಾರ ಯಶಸ್ವಿಯಾಗಿ ಆರನೇ ಬಾರಿ ಎರಡು ಸ್ಟಂಟ್‌ ಅಳವಡಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next