Advertisement

ಜಿಲ್ಲಾದ್ಯಂತ ಸಿದ್ಧಗಂಗಾ ಶ್ರೀ ಜನ್ಮದಿನಾಚರಣೆ

12:53 PM Apr 02, 2018 | |

ಮೈಸೂರು: ಅನ್ನದಾನ, ಜ್ಞಾನದಾನ, ಅಕ್ಷರದಾನಗಳ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಶತಾಯುಷಿ ಡಾ.ಶಿವಕುಮಾರ ಸ್ವಾಮಿಜಿ ಅವರ 111ನೇ ಜನ್ಮದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಭಾನುವಾರ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಯಿತು.

Advertisement

ಶ್ರೀಗಳ ಜನ್ಮದಿನದ ಹಿನ್ನೆಲೆಯಲ್ಲಿ ನಗರದ ದೇವಸ್ಥಾನಗಳಲ್ಲಿ ಶೀವಕುಮಾರ ಸ್ವಾಮೀಜಿ ಅವರ ಹೆಸರಿನಲ್ಲಿ ಅಭಿಷೇಕ, ಅರ್ಚನೆ ಹಾಗೂ ವಿಶೇಷ ಪೂಜೆ ನಡೆಸಲಾಯಿತು. ಶ್ರೀಸಿದ್ಧಗಂಗಾ ಸೇವಾ ಸಂಘದಿಂದ ನಡೆಸಲಾದ ಕಾರ್ಯಕ್ರಮದಲ್ಲಿ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಶ್ರೀಗಳ ಹೆಸರಿನಲ್ಲಿ ಅಭಿಷೇಕ, ಅರ್ಚನೆ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಪೂಜಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಅಂತೆಯೇ ಗೌರಿಶಂಕರ ನಗರದಲ್ಲಿರುವ ಅರಮನೆ ಶ್ರೀಪಂಚಗವಿ ಮಠದಲ್ಲಿ ಸಿದ್ಧಗಂಗಾ ಶ್ರೀಗಳ ಜನ್ಮ ದಿನವನ್ನು ಆಚರಿಸಲಾಯಿತು. ಮುಂಜಾನೆಯೇ ಗೌರಿಶಂಕರ ಸ್ವಾಮಿ ಗುದ್ದುಗೆಗೆ ರುದ್ರಾಭಿಷೇಕ, ಧಾರ್ಮಿಕ ಕಾರ್ಯಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀಗಳ ಕುರಿತಾಗಿ ಆಯೋಜಿಸಲಾಗಿದ್ದ ರಂಗೋಲಿ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವೀಣಾ, ಪ್ರೇಮಾಕುಮಾರ್‌, ಸುಧಾ ಅವರು ಬಹುಮಾನ ಪಡೆದರು. ಸಂಜೆ ವಚನ ಗಾಯನ ಮತ್ತು ಭಜನೆ ಕಾರ್ಯಕ್ರಮಗಳು ನಡೆಯಿತು.

ಸಸಿ ನೆಡುವ ಕಾರ್ಯಕ್ರಮ: ನಗರದ ಪ್ರಜಾnವಂತ ನಾಗರಿಕರ ವೇದಿಕೆಯಿಂದ ಶ್ರೀಗಳ ಜನ್ಮದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಗನ್‌ಹೌಸ್‌ ಬಳಿಯ ಕುವೆಂಪು ಉದ್ಯಾನವನದಲ್ಲಿ ನಡೆದ ಸಸಿ ನೆಡುವ ಅಭಿಯಾನ ಮತ್ತು ರೈತಾಪಿ ಉತ್ಪನ್ನ ಸ್ವದೇಶಿ ವಸ್ತುಗಳ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಇಳೈ ಆಳ್ವಾರ್‌ ಸ್ವಾಮೀಜಿ ಚಾಲನೆ ನೀಡಿದರು.

Advertisement

ಈ ವೇಳೆ ಬಿಜೆಪಿ ಮುಖಂಡ ಶ್ರೀವತ್ಸ ಮಾತನಾಡಿ, ಸಿದ್ಧಗಂಗಾ ಶ್ರೀಗಳು ವಿವಿಧ ದಾಸೋಹಗಳ ಮೂಲಕ ನಾಡಿನ ಒಳಿತಿಗಾಗಿ ಶ್ರಮಿಸಿದ್ದಾರೆ. ತಮ್ಮ ಸೇವೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಜೀವನದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಆರೋಗ್ಯಕ್ಕಿಂತ ಪ್ರಜಾರಕ್ಷಣೆಗಾಗಿ ಧಾರ್ಮಿಕ ಕೈಂಕರ್ಯಗಳನ್ನು ನಿತ್ಯವೂ ಪಾಲಿಸುವ ಶತಾಯುಷಿ ಶಿವಕುಮಾರ ಸ್ವಾಮೀಜಿ ಅವರು ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಆರ್‌.ರಘು, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ವಿಕ್ರಮ್‌ ಅಯ್ಯಂಗಾರ್‌, ಯಶಸ್ವಿನಿ ಸೋಮಶೇಖರ್‌, ವೇದಿಕೆಯ ಕಾರ್ಯದರ್ಶಿ ಸಂದೇಶ್‌ ಪವಾರ್‌, ಲಕ್ಷ್ಮೀದೇವಿ, ಜಯಸಿಂಹ, ಕುಮಾರ್‌ಗೌಡ, ರಂಗನಾಥ್‌, ಮಧುಸೂದನ್‌, ಪ್ರಮೋದ್‌ ಗೌಡ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next